ರಾಯಚೂರು.ಜ.13
ಮಕ್ಕಳ ಬಾಲ್ಯದಲ್ಲಿ ಕಂಡುಬರುವ ಮಾರಣಾಂತಿಕ ಕಾಯಿಲೆಗಳ ನಿಯಂತ್ರಣಕ್ಕೆ ಹುಟ್ಟಿದ ದಿನದಿಂದ ಒಂದು ವರ್ಷದೊಳಗೆ ಆರೋಗ್ಯ ಇಲಾಖೆಯ ಮೂಲಕ ಉಚಿತವಾಗಿ ಹಾಕಲಾಗುವ ಲಸಿಕೆಗಳನ್ನು ತಪ್ಪದೆ ಹಾಕಿಸಲು ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ತಾಯಂದಿರಿಗೆ ಹಾಗೂ ಪಾಲಕರಲ್ಲಿ ಮನವಿ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ರಾಯಚೂರು ನಗರದ ಹರಿಜನವಾಡಾ ನಗರ ಪ್ರಾಥಮಿಕ ಅರೋಗ್ಯ ಕೇಂದ್ರ ವ್ಯಾಪ್ತಿಯ ದೇವಿನಗರ ಅಂಗನವಾಡಿ ಕೇಂದ್ರದಲ್ಲಿ ಲಸಿಕಾ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಆಗಮಿಸಿದ ಪಾಲಕರಿಗೆ ಆರೋಗ್ಯ ಶಿಕ್ಷಣ ನೀಡಿ, ಮಗುವಿಗೆ ಬಾಲ್ಯಾವಧಿ ಕಾಡುವ ಮಾರಕ ರೋಗಗಳನ್ನು ತಡೆಗಟ್ಟಲು
ವಯಸ್ಸಿಗನುಸಾರವಾಗಿ ಉಚಿತವಾಗಿ ಲಸಿಕೆಗಳನ್ನು ಹಾಕಲಾಗುತ್ತಿದ್ದು, ಅವುಗಳೆಂದರೆ ಪೋಲಿಯೋ ರೋಗಕ್ಕೆ ಪೋಲಿಯೋ ದ್ರಾವಣ, ಬಾಲಕ್ಷಯಕ್ಕೆ ಬಿಸಿಜಿ ಲಸಿಕೆ, ಕಾಮಾಲೆ ರೋಗಕ್ಕೆ ಹೆಪಟೈಟಿಸ್ ಚುಚ್ಚುಮದ್ದು, ಗಂಟಲು ಮಾರಿ, ನಾಯಿಕೆಮ್ಮು ಧನುರ್ವಾಯು ರೋಟ ವೈರಸ್, ಹೆಚ್ ಇನ್‌ಪ್ಲ್ಯುಯೆಂಜಾ, ಕಾಮಾಲೆ ಗಾಗಿ ಪೆಂಟಾವೈಲೆಂಟ್ ಲಸಿಕೆ, ರೋಟಾವೈರಸ್ ಅತಿಸಾರಬೇದಿ ಗೆ ನಿಮೋಕಾಕಲ್ ಲಸಿಕೆ, ಮೆದುಳು ಜ್ವರ ರೋಗಕ್ಕೆ ಜಾಪನೀಸ್ ಎನ್ಸ್‌ಪಲಿಟಿಸ್ ಲಸಿಕೆ, ದಡಾರ ರೂಬೇಲ್ಲಾ ರೋಗಕ್ಕೆ ಮಿಸಲ್ಸ್ ರೂಬೆಲ್ಲಾ ಲಸಿಕೆ, ಹಾಗೂ ಸಂಜೆಯ ಹೊತ್ತು ಕಂಡುಬರುವ ಇರುಳುಗಣ್ಣು ರೋಗಕ್ಕೆ ವಿಟಾಮಿನ್-ಎ ಅನ್ನಾಂಗ ದ್ರಾವಣ, ನೀಡಲಾಗುತ್ತದೆ. ಇವೆಲ್ಲವುಗಳನ್ನು ಮಗುವಿನ ಒಂದು ವರ್ಷದೊಳಗೆ ಹಾಕಲಾಗುವುದು, ಕೆಲವು ರೋಗಗಳಿಗೆ ಅಂದರೆ ಪೋಲಿಯೋ, ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ದಡಾರ-ರೂಬೆಲ್ಲಾ ಮೆದುಳು ಜ್ವರ, ಕ್ಕೆ 16 ರಿಂದ 23 ತಿಂಗಳು ಒಳಗೆ ಹೆಚ್ಚುವರಿಯಾಗಿ ಬೂಸ್ಟರ್ ಡೋಸ್ ರೂಪದಲ್ಲಿ ನೀಡಲಾಗುವುದು. 5 ರಿಂದ 6 ವರ್ಷದಲ್ಲಿ ಪುನಃ ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ರೋಗಿಗಳಿಗೆ ಎರಡನೇಯ ಬಾರಿ ಬೂಸ್ಟರ್ ಡೋಸ್ ನೀಡಲಾಗುವುದು. ಈ ಹಿನ್ನಲೆಯಲ್ಲಿ ದಯವಿಟ್ಟು ಸಾರ್ವಜನಿಕರು ತಮ್ಮ ಮನೆಗಳ ಹತ್ತಿರ ಲಸಿಕೆ ಹಾಕುವ ಅಂಗನವಾಡಿ ಕೇಂದ್ರಗಳಗಳಲ್ಲಿ ತಪ್ಪದೆ ತೆರಳಿ ಲಸಿಕೆ ಹಾಕಿಸಲು ಮನವಿ ಮಾಡಿದರು.
ಪೌಷ್ಟಿಕ ಪುನಶ್ಚೇತನ ಕೇಂದ್ರದ ಸದುಪಯೋಗಕ್ಕೆ ಮನವಿ
ಮಗುವಿನ ಬೆಳವಣಿಗೆಗೆ ಅಡ್ಡಿಯಾಗುವ ಅಪೌಷ್ಟಿಕತೆಯನ್ನು ನಿವಾರಿಸಲು ಸರಕಾರವು ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯ ನಾಲ್ಕನೆಯ ಮಹಡಿಯಲ್ಲಿ ಪೌಷ್ಟಿಕ ಪುನಶ್ಚೇತನ ಕೇಂದ್ರ (ಎನ್‌ಆರ್‌ಸಿ) ಇದ್ದು ಇಲ್ಲಿ 14 ದಿನಗಳ ಕಾಲ ಮಗುವಿಗೆ ಪೌಷ್ಟಿಕಾಹಾರವನ್ನು ವೈಜ್ಞಾನಿಕವಾಗಿ ನೀಡುವ ಜೊತೆಗೆ ಮಗುವಿಗೆ ಅಗತ್ಯ
ಚಿಕಿತ್ಸೆ ನೀಡಲಾಗುವುದು. ಅಲ್ಲದೆ ತಾಯಂದಿರಿಗೆ 14 ದಿನಗಳ ಕಾಲ ಪ್ರತಿ ದಿನಕ್ಕೆ 370/- ರೂಪಾಯಿಯಂತೆ ಎನ್‌ಆರ್‌ಇಜಿ ಅಡಿಯ ಕೂಲಿಗೆ ಸಮಾನವಾದ ಮೊತ್ತವನ್ನು ಸಹ ಬ್ಯಾಂಕ್ ಖಾತೆಗೆ ಸಂದಾಯ ಮಾಡಲಾಗುವುದು.
ಜನನದ ಮಧ್ಯ ಅಂತರಕ್ಕಾಗಿ ತಾತ್ಕಾಲಿಕ ವಿಧಾನಗಳು ಇವೆ
ಮೊದಲ ಹೆರಿಗೆ ನಂತರ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಟ 3 ವರ್ಷಕ್ಕೆ ಕಡ್ಡಾಯವಾಗಿ ಮುಂದುಡುವುದು ತಾಯಿಯ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಮಹತ್ವವಾಗಿದ್ದು, ಇದಕ್ಕಾಗಿ ಸರಳವಾದ ಪ್ರತಿ ಮೂರು ತಿಂಗಳಿಗೊಂದು ಸಾರಿ ಹಾಕಿಸುವ ಅಂತರ ಚುಚ್ಚುಮದ್ದು ಎಲ್ಲ ಆಸ್ಪತ್ರೆಯಲ್ಲಿ ಹಾಕಲಾಗುವುದು. ಅಲ್ಲದೆ ಕಾಪರ-ಟಿ, ನುಂಗು ಮಾತ್ರೆ ಮತ್ತು ಪುರುಷರಿಗೆ ನಿರೋಧ ಉಚಿತವಾಗಿ ಲಭ್ಯವಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಈರಮ್ಮ, ನಾಗವೇಣಿ ಆಶಾ ಕಾರ್ಯಕರ್ತೆ,ನಾಗವೇಣಿ ಅಂಗನವಾಡಿ ಕಾರ್ಯಕರ್ತೆಯರಾದ ರೂಪಾ, ಜಿಂದಮ್ಮ, ಮಹಾದೇವಿ ಸೇರಿದಂತೆ ತಾಯಂದಿರು ಉಪಸ್ಥಿತರಿದ್ದರು.

