ಮಾನ್ವಿ : ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ನಡೆದ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಆಸ್ರ ಜಬೀನಾ ಖಾನಂ ಚಾಲನೆ ನೀಡಿ ಮಾತನಾಡಿ ಸರ್ಕಾರವು ಗ್ರಾಮ ಪಂಚಾಯಿತಿಗಳ ಮೂಲಕ ಗ್ರಾಮೀಣ ಭಾಗದ ಕೃಷಿ ಕೂಲಿಗಳು ಮಹಾನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವುದಕ್ಕಾಗಿ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತರಿ ಹಾಗೂ ಸ್ತ್ರೀ ಚೇತನ ಅಭಿಯಾನದಡಿಯಲ್ಲಿ ತಮ್ಮ ಗ್ರಾಮದಲ್ಲಿಯೇ ಗ್ರಾಮೀಣ ಪ್ರದೇಶದ ಪ್ರತಿ ಅರ್ಹ ಕುಟುಂಬದವರು ಒಂದು ಆರ್ಥಿಕ ವರ್ಷದಲ್ಲಿ 100 ದಿನ ಕೆಲಸವನ್ನು ಪಡೆಯುವ ಮೂಲಕ ಗಂಡು ಮತ್ತು ಹೆಣ್ಣಿಗೆ ಸಮಾನವಾಗಿ ಪ್ರತಿ ದಿನಕ್ಕೆ 370 ರೂ ಕೂಲಿಯನ್ನು ನೀಡಲಾಗುವುದು ಅದರಂತೆ 37 ಸಾವಿರ ರೂ ಕೂಲಿಯನ್ನು ಪಡೆಯ ಬಹುದಾಗಿದೆ. ಹಾಗೂ ಪ್ರಧಾನ ಮಂತ್ರಿ ಭೀಮಾ ಸುರಕ್ಷಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆಯಡಿಯಲ್ಲಿ ಕೆಲಸದ ಸ್ಥಳದಲ್ಲಿ ಮೃತಪಟ್ಟಲ್ಲಿ ಕುಟುಂಬದ ಅವಲಂಭಿತರಿಗೆ 2ಲಕ್ಷ ವಿಮೆ ಪರಿಹಾರವನ್ನು ನೀಡಲಾಗುವುದು. ಸಾಮಾಜಿಕ ಭದ್ರತೆ ಕಲ್ಪಿಸಲು ನರೇಗ ಯೋಜನೆಯಡಿಯಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ಗರ್ಭಿಣಿಯರಿಗೆ ಕೇಲಸದಲ್ಲಿ ಶೇ 50ರಷ್ಟು ವಿನಾಯಿತಿ ದೊರೆಯುತ್ತದೆ.ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳುವುದಕ್ಕೆ ಶಿಶು ಪಾಲನಾ ಕೇಂದ್ರದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.
ಉಚಿತ ಆರೋಗ್ಯ ಶಿಬಿರದಲ್ಲಿ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿ ಸುಭಾನ್ ನರೇಗಾ ಕೂಲಿ ಕಾರ್ಮಿಕರಿಗೆ ರಕ್ತದೋತ್ತಡ,,ಮಧುಮೇಹ.ರಕ್ತದ ಕ್ಯಾನ್ಸರ್, ಕಫ,ಸೇರಿದಂತೆ ಅಗತ್ಯ ಆರೋಗ್ಯ ತಪಾಸಣೆ ನಡೆಸಿ ಔಷಾಧಿಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಸಮುದಾಯ ಸುರಕ್ಷ ಅಧಿಕಾರಿ ಯಲ್ಲಮ್ಮ , ತಾಲೂಕ ಐ.ಇ.ಸಿ. ಸಂಯೋಜಕರಾದ ಈರೇಶ್, ಆಶಾ ಕಾರ್ಯಕರ್ತೆಯರಾದ ಶ್ರೀ ದೇವಿ,ನೀಲಮ್ಮ ,ಕರಿಬಸಯ್ಯ ಡಿ.ಇ.ಒ. ,ರಾಯಪ್ಪ ಬಿ .ಎಫ್. ಟೀಗಳು ಹಾಗೂ ನರೇಗ ಕೂಲಿ ಕಾರ್ಮಿಕರು ಇದ್ದರು.ಮಾನ್ವಿ : ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ನರೇಗ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ ನಡೆಯಿತು

