ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಜನವರಿ 25ರ ಬೆಳಗ್ಗೆ 6 ಗಂಟೆಗೆ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿದ್ದು, ಓಟವು ನಗರದ ಜಿಲ್ಲಾ ಕ್ರೀಡಾಂಗಣದಿAದ ಆರ್.ಟಿ.ಓ ಸರ್ಕಲ್, ಮಹಾವೀರ್ ಸರ್ಕಲ್ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ಸೇರಲಿದೆ. ಪ್ರಥಮ ಬಹುಮಾನ 15 ಸಾವಿರ, ದ್ವಿತೀಯ ಬಹುಮಾನ 10 ಸಾವಿರ ಹಾಗೂ ತೃತೀಯ ಬಹುಮಾನ 5ಸಾವಿರ ರೂ.ಗಳನ್ನು ನೀಡಲಾಗುವುದು. ಆಸಕ್ತರು ಈ ಸ್ಪರ್ಧೆಯ ನೋಡಲ್ ಅಧಿಕಾರಿಗಳಾದ ಯುವಜನಾ ಸೇವಾ ಮತ್ತು ಕ್ರೀಡಾ ಇಲಾಖೆಯ ಚಂದ್ರಶೇಖರ ಹೊಸೂರು ಅವರ ಮೊಬೈಲ್ ಸಂಖ್ಯೆ: 9886551244 ಅಥವಾ ಅಥ್ಲಿಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ತಿಮ್ಮಾರೆಡ್ಡಿ ಅವರ ಮೊಬೈಲ್ ಸಂಖ್ಯೆ: 9844484481ಗೆ ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ.
ಈ ಕ್ರೀಡೆಗಳಲ್ಲಿ ಆಸಕ್ತರು ಭಾಗವಹಿಸಿ ರಾಯಚೂರು ಜಿಲ್ಲೆ ಹೆಮ್ಮೆಪಡುವಂತಹ ಕ್ರೀಡೋತ್ಸವ ಮೂಡಿಬರಲು ಸಹಕರಿಸಿ ರಾಯಚೂರು ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲಾ ಕ್ರೀಡಾಪಟುಗಳು ಮತ್ತು ಸಾರ್ವಜನಿಕರಲ್ಲಿ ವಿನಂತಿಸಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *