ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 1ರಂದು ಮಾಡಿವಾಳ ಮಾಚಿದೇವ ಜಯಂತಿ ನಡೆಯಲಿದ್ದು, ಈ ಜಯಂತಿ ಅಂಗವಾಗಿ ಜನವರಿ 16ರ ಮಧ್ಯಾಹ್ನ 3.30ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ಸಮಾಜದ ಮುಖಂಡರು, ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *