ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ಅಂತರಾಷ್ಟಿಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:01-01-2024 ರಿಂದ 31-12-2024 ರವರೆಗೆ) ಅಂತರಾಷ್ಟ್ರೀಯ, raashtra, ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಸಹಾಯ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಂತರಾಷ್ಟ್ರೀಯ, ರಾಷ್ಟ್ರ, ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿಗಳನ್ನು ಅಧಿಕೃ ಜಾಲತಾಣ: https://sevasindhu.karnataka.gov.in ನಲ್ಲಿ ಜನವರಿ 31ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ರಾಯಚೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
