ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಾ. ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ 2025-26ನೇ ಸಾಲಿನ ಕೊಡಗು ಜಿಲ್ಲೆಯ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ರಾಜ್ಯ ಸರ್ಕಾರವು ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಜನರಿಗೆ ತಲುಪುತ್ತಿರುವುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಫಲಾನುಭವಿಗಳಿಗೆ ಯಾವುದೇ ಅಡೆತಡೆ ಇಲ್ಲದೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಅವರವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಶ್ರೀ ಅರುಣ್ ಮಾಚಯ್ಯ,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಪಿ.ಕಲಾವತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

