ಲಿಂಗಸಗೂರು.ಜ.13 –
ಪಟ್ಟಣದ ಪೊಲೀಸ್ ಠಾಣೆಗೆ ನೂತನ ಎಸ್‌ಪಿ ಅರುಣಾಂಕ್ಷು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ರಾತ್ರಿ ಗಸ್ತು ಸಮಯದಲ್ಲಿ ಎಮ್‌ಓಬಿ, ಬೀಗ ಹಾಕಿದ ಮನೆಗಳ ಮೇಲೆ ನಿಗಾ ಇಡಬೇಕು. ಸಮುದಾಯ ಗುಂಪುಗಳ ಶಾಂತಿ ಸಭೆ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಬೇಕು. ಎಂದು ಸಿಬ್ಬಂಧಿಗಳಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ದತ್ತಾತ್ರೇಯ ಕಾರ್ನಾಡ್, ಪಿಐ ಹೊಸಕೇರಪ್ಪ ಸೇರಿದಂತೆ ಪೊಲೀಸ್ ಸಿಬ್ಬಂಧಿಗಳು ಇದ್ದರು.

