ಮಾನ್ವಿ : ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ರವರಿಗೆ ವಿಕಲಚೇತನರ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಮನವಿ ಪತ್ರ ಸಲ್ಲಿಸಲಾಗಿದೆ.
ಸಂಕಲ್ಪ ವಿಕಲಚೇತನರ ಒಕ್ಕೂಟ, ರಾಯಚೂರು ವತಿಯಿಂದ ವಿಕಲಚೇತನರ ಮಾಸಿಕ ಪಿಂಚಣಿ, ಉಚಿತ ಬಸ್ ಪಾಸ್, ವಿಕಲಚೇತನರಿಗಾಗಿ ಮೀಸಲಾದ 5% ಅನುದಾನದ ಸಮರ್ಪಕ ಬಳಕೆ, ಹಾಗೂ ವಿಶೇಷವಾಗಿ ಗ್ರಾಮ ಪಂಚಾಯಿತಿ, ಪಟ್ಟಣ, ನಗರ ಮತ್ತು ತಾಲೂಕು ಮಟ್ಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಶಾಶ್ವತಗೊಳಿಸುವುದು ಅಥವಾ ಕನಿಷ್ಠ ವೇತನ ನಿಗದಿಪಡಿಸುವುದು, ಪ್ರತ್ಯೇಕ ಕಚೇರಿ ಕೊಠಡಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ವಿಕಲಚೇತನರ ಹಾಗೂ ಪುನರ್ವಸತಿ ಕಾರ್ಯಕರ್ತರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಈ ಮನವಿ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲೂ ವಿಕಲಚೇತನರ ಹಕ್ಕು ಮತ್ತು ಸಬಲೀಕರಣಕ್ಕಾಗಿ ಸಂಘಟನೆಯ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಸಂಕಲ್ಪ ವಿಕಲಚೇತನರ ಒಕ್ಕೂಟ ತಿಳಿಸಿದೆ.


