ಮಸ್ಕಿ: ನನ್ನ ಮತ ಕ್ಷೇತ್ರದಲ್ಲಿ ಬಹುತೇಕ ಪ್ರದೇಶವೂ ಮಳೆಯಾಶ್ರಿತ ಪ್ರದೇಶವನ್ನು ಹಸಿರಾಗಿಸುವ ಸಂಕಲ್ಪ ತೋರಲಾಗಿದೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ ಹೇಳಿದರು.
ಪಟ್ಟಣದ ಬಸವೇಶ್ವರ ನಗರದಲ್ಲಿರುವ ನಗರ ಯೋಜನಾ ಪ್ರಾಧಿಕಾರದ ಕಛೇರಿಯಲ್ಲಿ ಪಕ್ಕದಲ್ಲಿ ಹಮ್ಮಿಕೊಂಡಿದ್ದ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಬೋರ್‌ವೆಲ್ ಸಾಮಾಗ್ರಿಗಳು ಮತ್ತು ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನಾ ಘೋಷಣೆ ಮಾಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಜನಾಂಗದವರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿಯ ಗಂಗಾ ಕಲ್ಯಾಣ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಬೋರ್‌ವೆಲ್ ಸಾಮಾಗ್ರಿಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಹಸಿರಾಗಿಸುವುದೇ ನನ್ನ ಧ್ಯೇಯವಾಗಿದೆ ಎಂದು ಹೇಳಿದರು.
ಒಣ ಬೇಸಾಯದ ಪ್ರದೇಶದ ರೈತರ ಅನುಕೂಲಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲಾಗುತ್ತಿದೆ. ಸಣ್ಣ ನೀರಾವರಿ ಇಲಾಖೆಯಿಂದ ಈಗಾಗಲೇ ೨೦೦ ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ ಅದರಲ್ಲಿ ಶೇಕಡಾ ೯೯%ರಷ್ಟು ಬೋರ್ ಗಳಲ್ಲಿ ನೀರು ಬಿದ್ದಿವೆ. ಎಲ್ಲ ಸಮಾಜದ ರೈತರಿಗೆ ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಬೋರ್‌ಗಳನ್ನು ಕೊರೆಸಿ ರೈತರು ಗುಳೆ ಹೊಗುವುದನ್ನು ತಪ್ಪಿಸಿ ಕ್ಷೇತ್ರವನ್ನು ಹಸಿರುಕ್ರಾಂತಿ ಮಾಡುವುದೇ ನನ್ನ ಮುಖ್ಯ ಉದ್ದೇಶ ವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ವಿವಿಧ ಕಾರ್ಮಿಕರಿಗೆ ಕಾರ್ಮಿಕರ ಕಿಟ್‌ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಸಿದ್ದನಗೌಡ ತುರ್ವಿಹಾಳ, ಗ್ಯಾರಂಟಿ ಸಮಿತಿ ಯೋಜನೆ ಅಧ್ಯಕ್ಷ ಮಹಿಬೂಬ್ ಸಾಬ್, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾಗಭೂಷಣ, ಕಾರ್ಮಿಕರ ಇಲಾಖೆಯ ಅಧಿಕಾರಿ ಶಾಂತಮೂರ್ತಿ, ಬಸ್ಸಪ್ಪ ಜಂಗಮರಳ್ಳಿ, ಕೆಡಿಪಿ ಸದಸ್ಯ ಬಸವಂತಪ್ಪ ಸೇರಿದಂತೆ ಇನ್ನಿತರರಿದ್ದರು.

