ರಾಯಚೂರು ಜನವರಿ 14 (ಕರ್ನಾಟಕ ವಾರ್ತೆ): 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಪ್ರಮುಖರಾದ ಶಿವಯೋಗಿ ಸಿದ್ಧರಾಮೇಶ್ವರ ಅವರ ಜಯಂತಿಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 14ರಂದು ಆಚರಣೆ ಮಾಡಲಾಯಿತು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಸೇರಿದಂತೆ ಇತರೆ ಗಣ್ಯರು ಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಜ್ಯೋತಿ ಬೆಳೆಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ರಾಯಚೂರು ತಹಸೀಲ್ದಾರ್ ಸುರೇಶ್ ವರ್ಮ, ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಸಂತೋಷ ರಾಣಿ, ಸಿಪಿಐಗಳಾದ ಉಮೇಶ ಕಾಂಬಳೆ, ನಾಗರಾಜ್ ಮೇಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಇದ್ದರು.
ಅದ್ದೂರಿ ಮೆರವಣಿಗೆ: ಇದಕ್ಕು ಮೊದಲು ನಗರದ ಆಶಾಪೂರು ರಸ್ತೆಯ ಶಿವಯೋಗಿ ಸಿದ್ಧರಾಮೇಶ್ವರ ವೃತ್ತದಿಂದ ಮೆರವಣಿಗೆಯು ಆರಂಭಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾ ರಂಗ ಮಂದಿರಕ್ಕೆ ಬಂದು ಮುಕ್ತಾಯವಾಯಿತು. ಮೆರವಣಿಗೆಗೆ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಹಾಗೂ ನಗರ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ ಅವರು ಚಾಲನೆ ನೀಡಿದರು. ಈ ವೇಳೆ ರಾಯಚೂರು ಕಿಲ್ಲಾನ ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮೀಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ತಹಸೀಲ್ದಾರರು ಮತ್ತು ಸಮಾಜದ ಮುಖಂಡರು ಇದ್ದರು.

Leave a Reply

Your email address will not be published. Required fields are marked *