ಅರಕೇರಾ: ತಾಲೂಕಿನ ಬಿ.ಗಣೇಕಲ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಕನಾಯಕ ತಾಂಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹ ಶಿಕ್ಷಕರಾದ ಸದ್ದಾಂ ಹುಸೇನ್ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರು ಮೊದಲು ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಂತರ ಶಿಕ್ಷಕರ ಹುದ್ದೆಗೆ ನೇಮಕಗೊಂಡರು ಸದ್ದಾಂ ಹುಸೇನ್ ಮಕ್ಕಳಿಗೆ ಪಾಠ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಹಾಡು, ಕಥೆ, ಡ್ಯಾನ್ಸ್ ಮತ್ತು ಪಿಕ್ನಿಕ್ ಹೀಗೆ ಹಲವಾರು ಚಟುವಟಿಕೆಗಳ ಮುಖಾಂತರ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಅಚ್ಚು-ಮೆಚ್ಚಿನ ಶಿಕ್ಷಕರಾಗಿದ್ದಾರೆ ಇಂತಹ ಶಿಕ್ಷಕರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದ್ದು ಗ್ರಾಮಸ್ಥರು ಮತ್ತು ಬಿ.ಗಣೇಕಲ್ ಸ್ನೇಹ ಬಳಗ ಶುಭಹಾರೈಸಿದ್ದಾರೆ.

ದೇವದುರ್ಗ ತಾಲೂಕಿನ ಹೂವಿನಹೆಡಗಿ ಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜನವರಿ 17 ಶನಿವಾರ ರಂದು ನಡೆಯುವ ತಾಲೂಕು ಮಟ್ಟದ ಗುರು ನಮನ, ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಶಸ್ತಿ ಪ್ರಧಾನ ಮಾಡಲಿದೆ.

Leave a Reply

Your email address will not be published. Required fields are marked *