ರಾಯಚೂರು: ‘ಪ್ರತಿ ಮಗು ಕ್ರೀಡೆಯಲ್ಲಿ ಭಾಗವಹಿಸಬೇಕು. ಅವರ ದೈಹಿಕ ಮಾನಸಿಕ ಬೌದ್ಧಿಕ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕ ರಾಜಣ್ಣ ಹೇಳಿದರು. ಇಲ್ಲಿಯ ಬಸವಶ್ರೀ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
‘ವಿದ್ಯಾರ್ಥಿನಿಯರು ಹೆಚ್ಚಿನ ಆಸಕ್ತಿ ಆಟದಲ್ಲಿ ತೊಡಗಿರಬೇಕು. ಆಟದಿಂದ ನಾಯಕತ್ವದ ಗುಣಗಳು, ಆಟದ ಉತ್ಸಾಹ, ಸೋಲು ಗೆಲುವು ಎಲ್ಲದರ ಅನುಭವ ಸ್ವೀಕರಿಸಿ ಯಶಸ್ಸಿನತ್ತ ಸಾಗಬೇಕು’ ಎಂದು ತಿಳಿಸಿದರು.

ಶಾಲೆಯ ಸಂಸ್ಥಾಪಕಿ ಲಲಿತಾ ಎಂ. ಮಾತನಾಡಿದರು. ಸುಗುಣ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ. ಬಸನಗೌಡ, ಶಾರದ ದಯಾಸಾಗರ, ಕ್ರೀಡಾ ಶಿಕ್ಷಕ ಆಂಥೋನಿ ಉಪಸ್ಥಿತರಿದ್ದರು.

ಶಾಲೆಯ ಮಕ್ಕಳು ಸಮವಸ್ತ್ರದಲ್ಲಿ ಲೇಜಿಮ್, ಡಂಬಲ್ಸ್, ಬೊಂಬು, ಬಳಸಿ ಆಕರ್ಷಕವಾಗಿ ನೃತ್ಯ ಪ್ರದರ್ಶಿಸಿದರು. ನಂತರ ಕ್ರೀಡೆ ವಿಜೇತರಿಗೆ ಬಹುಮಾನವಾಗಿ ಪದಕ, ಟ್ರೋಫಿ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಆಂಥೋನಿ ಮಕ್ಕಳಿಗೆ ಬಹುಮಾನ ವಿತರಿಸಿದರು.

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು