ಕಲಬುರ್ಗಿ, ತಿಂಥಣಿ ಬ್ರಿಜ್:
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ, ತಿಂಥಣಿ ಬ್ರಿಜ್ – ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಅಂತ್ಯಕ್ರಿಯೆಯು ಇಂದು ಭಕ್ತಿಭಾವ ಹಾಗೂ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ರಾಜ್ಯ ಸರ್ಕಾರದ ಪರವಾಗಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ಅವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ವಿಧಿವಿಧಾನಗಳ ಉಸ್ತುವಾರಿಯನ್ನು ವಹಿಸಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು, ವಿಧಾನ ಪರಿಷತ್ತಿನ ಸಭಾ ನಾಯಕರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್. ಬೋಸುರಾಜು ಜೀ, ಗ್ಯಾರಂಟಿ ಯೋಜನೆಗಳ ರಾಜ್ಯಾಧ್ಯಕ್ಷರಾದ ಶ್ರೀ ಎಚ್.ಎಂ. ರೇವಣ್ಣ , ಮಾಜಿ ಸಂಸದರಾದ ಕೆ ವಿರುಪಾಕ್ಷಪ್ಪ, ಎಂಎಲ್ಸಿ ಬಸವನಗೌಡ ಬಾದರ್ಲಿ, ಅವರು ಉಪಸ್ಥಿತರಿದ್ದು, ಪೂಜ್ಯ ಶ್ರೀಗಳ ಅಂತಿಮ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಪೂಜ್ಯ ಶ್ರೀಗಳ ಅಂತ್ಯಕ್ರಿಯೆಯನ್ನು ಸಂಪೂರ್ಣವಾಗಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದ್ದು, ಪೊಲೀಸ್ ಪಡೆ ಕುಶಾಲುತೋಪು ಹಾರಿಸಿ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿತು.
ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆ ನೀಡಿದ ಮಹಾನ್ ಸಂತರು. ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ಅವರು ಮಾಡಿದ ಸೇವೆ ಲಕ್ಷಾಂತರ ಜನರ ಬದುಕನ್ನು ಸ್ಪರ್ಶಿಸಿದೆ. ಅವರ ಜೀವನವು ಸಮರ್ಪಣೆ, ತ್ಯಾಗ ಮತ್ತು ಮಾನವೀಯ ಮೌಲ್ಯಗಳಿಗೆ ಅತ್ಯುನ್ನತ ಉದಾಹರಣೆಯಾಗಿದೆ ಎಂದು ಶ್ರದ್ಧಾಂಜಲಿ ಸಲ್ಲಿಸಿದ ಗಣ್ಯರು ಸ್ಮರಿಸಿದರು.

Leave a Reply

Your email address will not be published. Required fields are marked *