ರಾಯಚೂರು : ಎಡದೊರೆ ನಾಡು – ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದ ದಿನಾಂಕವನ್ನು ಮುಂದೂಡಲಾಗಿದೆ.
ಈ ಮೊದಲು ಜನವರಿ 29, 30 ಮತ್ತು 31ರಂದು ಮೂರು ದಿನಗಳ ಕಾಲ ರಾಯಚೂರು ನಗರದಲ್ಲಿ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದ ಉತ್ಸವವನ್ನು, ಅನಿವಾರ್ಯ ಕಾರಣಗಳಿಂದಾಗಿ ಫೆಬ್ರವರಿ 06, 07 ಮತ್ತು 08, 2026ರಂದು ಮೂರು ದಿನಗಳ ಕಾಲ ನಡೆಸಲಾಗುವುದು ಎಂದು ಮಾನ್ಯ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳು, ಸಂಘ–ಸಂಸ್ಥೆಗಳು ಹಾಗೂ ಸಾರ್ವಜನಿಕರು ಈ ದಿನಾಂಕ ಬದಲಾವಣೆಯನ್ನು ಗಮನಿಸಿ ಸಹಕರಿಸುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *