ರಾಯಚೂರು : ತಿಂಥಣಿಯ ಕನಕ ಗುರು ಪೀಠದ ಆವರಣದಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದರಾಮನಂದ ಸ್ವಾಮೀಜಿ ಅಂತ್ಯಕ್ರಿಯೆ ಅಪಾರ ಭಕ್ತ ಸಮೂಹದ ಸಮ್ಮುಖದಲ್ಲಿ ನೆರವೇರಿಸಲಾಯಿತು.
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಅವರು ಸರ್ಕಾರದ ಪ್ರತಿನಿಧಿಯಾಗಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಪ್ರಮುಖ ಗಣ್ಯರು ಸ್ವಾಮೀಜಿ ಅಂತಿಮ ದರ್ಶನ ಪಡೆದರು. ಅಂತ್ಯ ಸಂಸ್ಕಾರದಲ್ಲಿ 15 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು.


