ತಾಳಿಕೋಟಿ: ಇವತ್ತು ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಕೇವಲ ಗುಣಮಟ್ಟದ ಶಿಕ್ಷಣ ಕೊಟ್ಟರೆ ಸಾಲದು ಅವರಿಗೆ ಉತ್ತಮ ಸಂಸ್ಕಾರಗಳನ್ನೂ ಕೊಡುವ ಅಗತ್ಯವಿದೆ. ಬ್ರಿಲಿಯಂಟ್ ಸಂಸ್ಥೆ ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಹಾಗೂ ಸಂಸ್ಕೃತಿಯನ್ನೂ ತಿಳಿಸಿಕೊಡುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಕೋಲಾರ-ಬೇಲೂರ ಪಟ್ಟದೇವರು ಹಿರೇಮಠದ ಪೂಜ್ಯ ಶ್ರೀ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರ ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡ “ಬ್ರಿಲಿಯಂಟ್ ಕಲಾ ವೈಭವ” ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಕ್ಕಳು ಮೊಬೈಲ್ ದಾಸರಾಗದಂತೆ ನೋಡಿಕೊಳ್ಳಿ ಇದರಿಂದ ಹಲವಾರು ಸಮಸ್ಯೆಗಳು ಉದ್ಭವವಾಗುತ್ತಿವೆ, ಅವರ ಮೇಲೆ ನಿಗಾಹ ವಹಿಸಿ ಅವರ ಭೋಗದ ಜೀವನಕ್ಕೆ ಕಡಿವಾಣ ಹಾಕಿ ಎಂದ ಅವರು ಹೆತ್ತವರ ಪಾದಪೂಜೆ ಕಾರ್ಯಕ್ರಮ ಇಟ್ಟುಕೊಂಡಿರುವುದು ಸಂಸ್ಥೆಗೆ ಪರಂಪರೆ ಕುರಿತು ಇರುವ ಕಾಳಜಿಯನ್ನು ಎತ್ತಿ ತೋರಿಸುತ್ತದೆ.ಈ ಸಂಸ್ಥೆ ಭವಿಷ್ಯದಲ್ಲಿ ಇಡೀ ರಾಜ್ಯದಲ್ಲಿಯೇ ಒಂದು ಮಾದರಿ ಸಂಸ್ಥೆಯಾಗಿ ಬೆಳೆಯಲಿದೆ ಎಂದರು. ಸಮಾರಂಭ ಉದ್ಘಾಟಿಸಿ ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಅವರು ಮಾತನಾಡಿ ಶಿಕ್ಷಣದಿಂದಲೇ ಸಮಾಜದ ಸರ್ವಾಂಗೀಣ ಪ್ರಗತಿ ಸಾಧ್ಯ, ಮನುಷ್ಯನ ಸ್ವಾವಲಂಬಿ ಬದುಕಿಗೆ ಶಿಕ್ಷಣ ಅಗತ್ಯವಾಗಿದೆ, ಬ್ರಿಲಿಯಂಟ್ ಶಿಕ್ಷಣ ಸಂಸ್ಥೆ ಜಿಲ್ಲೆಯ ಮಾದರಿ ಸಂಸ್ಥೆಯಾಗಿದೆ ಇಲ್ಲಿಯ ಮಕ್ಕಳು ತಾಲೂಕಿನ ಕೀರ್ತಿಯನ್ನು ರಾಜ್ಯಮಟ್ಟದವರಿಗೆ ತೆಗೆದುಕೊಂಡು ಹೋಗಿದ್ದಾರೆ ನಾನು ಸಂಸ್ಥೆಯ ಅಧ್ಯಕ್ಷರಿಗೆ,ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗಕ್ಕೆ ಅಭಿನಂದಿಸುತ್ತೇನೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಸರ್ವಜ್ಞ ವಿದ್ಯಾ ಪೀಠದ ಅಧ್ಯಕ್ಷ ಸಿದ್ಧನಗೌಡ ಮಂಗಳೂರ ಮಾತನಾಡಿ ಈ ಕಾರ್ಯಕ್ರಮ ಶಿಕ್ಷಣ ಸಂಸ್ಥೆಗಳಿಗೆ ಒಂದು ಮಾದರಿಯಾಗಿದೆ. ಇಲ್ಲಿಯ ಮಕ್ಕಳು ರಾಜ್ಯ ಮಟ್ಟದಲ್ಲಿ ಸಾಕಷ್ಟು ಹೆಸರನ್ನು ಮಾಡಿದ್ದಾರೆ, ಆದರೆ ಇವತ್ತು ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಸುಲಭದ ಕೆಲಸವಲ್ಲ ಸಾಕಷ್ಟು ಸಮಸ್ಯೆಗಳು ಎದುರಿಸಬೇಕಾಗುತ್ತದೆ ಎಲ್ಲರ ಸಹಕಾರ ಇದ್ದಾಗ ಮಾತ್ರ ಶಿಕ್ಷಣ ಸಂಸ್ಥೆಗಳು ಬೆಳೆಯಲು ಸಾಧ್ಯ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರಮಠ, ಸಿ ಆರ್ ಸಿ ರಾಜು ವಿಜಾಪುರ ಹಾಗೂ ನಿರ್ದೇಶಕ ಎಸ್.ಎಚ್. ಪಾಟೀಲ ಮಾತನಾಡಿದರು. ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಬಿ. ನಡುವಿನಮನಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಾದ ಭೀಮನಗೌಡ ಸೂಗೂರು, ರಫೀಕ್ ಮೋರಟಗಿ, ಶ್ರವಣ ಕುಮಾರ ಪೂಜಾರಿ, ಅಶ್ವಿನಿ ಹಿರೇಮಠ ಹಾಗೂ ಸುಮಿತ್ ಸುಣದಳ್ಳಿ ಇವರನ್ನು ಸನ್ಮಾನಿಸಲಾಯಿತು.ಮು.ಗು. ಡಾ.ವಿನಾಯಕ್ ಪಟಗಾರ ವರದಿ ವಾಚಿಸಿದರು.ಶಿಕ್ಷಕ ಸಿದ್ದು ಕರಡಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಎಸ್ ಎಸ್ ಹಿರೇಮಠ, ಸಿ ಆರ್ ಸಿ ರಾಜು ಮೂರಮಾನ,ಮು.ಗು.ಬಿ.ಜಿ.ಕರಕಳ್ಳಿ,ಎ.ಎಂ.ಕೋಳ್ಯಾಳ,ಆಡಳಿತ ಮಂಡಳಿ ಉಪಾಧ್ಯಕ್ಷ ಆರ್ ಬಿ ನಡುವಿನಮನಿ, ಕಾರ್ಯದರ್ಶಿ ಎಮ್ ಬಿ ಮಡಿವಾಳರ, ನಿರ್ದೇಶಕರಾದ ಎಸ್ ಎಚ್ ಪಾಟೀಲ, ಶಶಿಧರ್ ಎಂ ಬಿರಾದಾರ, ನಿರ್ದೇಶಕಿ ಎಲ್ಎಂ ಬಿರಾದಾರ, ಎನ್.ಎಸ್.ಗಡಗಿ, ಮುಖ್ಯೋಪಾಧ್ಯಾಯರು, ಬೋಧಕ ಭೋದಿಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ವೇದಿಕೆ ಕಾರ್ಯಕ್ರಮದ ನಂತರ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Leave a Reply

Your email address will not be published. Required fields are marked *