ತಾಲೂಕು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನಿರಂತರವಾಗಿ ಶ್ರಮಿಸಿದ ಇಟಗಿಯ ಮುಖ್ಯ ಶಿಕ್ಷಕ ಮೌನೇಶ ಹಿರೇಮಠ ರವರಿಗೆ 2025-2026 ನೇ ಸಾಲಿನ ದೇವದುರ್ಗ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ, ದೇವದುರ್ಗ ತಾಲೂಕಿನ ಹೂವಿನಹೆಡಗಿ ಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜ.17 ರಂದು ನಡೆಯುವ ತಾಲೂಕು ಮಟ್ಟದ ಗುರು ನಮನ, ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶಿಕ್ಷಣ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ, ಮೊದಲು 2016 ರಲ್ಲಿ ಸರ್ಕಾರಿ ಹುದ್ದೆಗೆ ಆಯ್ಕೆಯಾಗಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇಮನಾಳ ಶಾಲೆಯಲ್ಲಿ ಸೇವೆಗೆ ಸೇರಿ ಇವರು 07 ವರ್ಷಗಳ ಕಾಲ ಸೇವೆ ಸಲ್ಲಿಸಿದನಂತರ ಹೇಮನಾಳ ಶಾಲೆಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಟಗಿಗೆ ವರ್ಗಾವಣೆಯಾಗಿ ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಟಗಿಯಲ್ಲಿ ಪ್ರಭಾರಿ ಮುಖ್ಯ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯ ಶಿಸ್ತು, ಆಡಳಿತಾತ್ಮಕ ಸುಧಾರಣೆ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದನ್ನು ಗಮನಿಸಿದ ಶಿಕ್ಷಣ ಇಲಾಖೆ, ಶಿಕ್ಷಕರ ಸಂಘ ಇವರನ್ನು ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಟಗಿಯಲ್ಲಿ ಪ್ರಭಾರಿ ಮುಖ್ಯ ಗುರುಗಳಾಗಿ ಕನ್ನಡ ವಿಷಯ ಭೊದನೆ ಮಾಡುತ್ತಿದ್ದಾರೆ ಅವರು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಕುರಿತು ಆಸಕ್ತಿ ಮೂಡಿಸಿ ಸರಳ ಹಾಗೂ ಪರಿಣಾಮಕಾರಿ ಬೋಧನಾ ವಿಧಾನದಿಂದ ಗಮನಾರ್ಹ ಸಾಧನೆ ಮಾಡಿದ್ದು,
ಶಿಕ್ಷಕರ ಶಿಸ್ತು ಮತ್ತು ಮಕ್ಕಳ ಸ್ನೇಹಿ ಬೋಧನಾ ಶೈಲಿಯ ಮೂಲಕ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದಾರೆ. ಶಿಕ್ಷಣ ಇಲಾಖೆಯು ಇವರ ಕರ್ತವ್ಯ ನಿಷ್ಠೆ, ಶೈಕ್ಷಣಿಕ ನಾವೀನ್ಯತೆ ಹಾಗೂ ಮಕ್ಕಳ ಜೊತೆ ಸರಳತೆ ಅನ್ನೋನ್ಯತೆ, ಉತ್ತಮ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಸಮಾಜಮುಖಿ ಕಾರ್ಯಗಳನ್ನು ಗಮನಿಸಿ ಶಿಕ್ಷಣ ಇಲಾಖೆ, ಶಿಕ್ಷಕರ ಸಂಘ ಇವರನ್ನು ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ಗೌರವಿಸಿದೆ.
ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಆ ಶಾಲೆಗಳ ಆಡಳಿತ ಮಂಡಳಿ SDMC, ಸಹೋದ್ಯೋಗಿ, ಶಿಕ್ಷಕರ ಬಳಗ, ವಿದ್ಯಾರ್ಥಿಗಳು ಹಾಗೂ ತಾಲೂಕಿನ ಶಿಕ್ಷಣ ಅಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸಂಬಂಧಿಕರು, ರಾಜಕೀಯ ಪಕ್ಷಗಳ ಮುಖಂಡರು ವಿಶೇಷವಾಗಿ ಜ್ಞಾನ ವೃಕ್ಷ ತಂಡ ಸಂತೋಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

