ಲಿಂಗಸುಗೂರು : ಕಲ್ಯಾಣ ಕರ್ನಾಟಕದಲ್ಲಿ ೩೭೧ (ಜೆ) ಜಾರಿಯಾಗಿ ದಶಕಗಳು ಕಳೆದರು ಶೈಕ್ಷಣಿಕ ಸೌಲಭ್ಯಗಳಿಲ್ಲದೇ ಈ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ತುಂಬ ಹಿಂದುಳಿಯುವAತಾಗಿದೆ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಅಬುಬಕರ್ ಸಿದ್ದಿಕಿ ಆರೋಪಿಸಿದರು.

ಲಿಂಗಸುಗೂರು ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶದ ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಎದುರಿಸಲು, ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ಘಟಕ ಸೆಂಟರ್ ಫಾರ್ ಎಜುಕೇಷನಲ್ ರಿಸರ್ಚ್ ಅನಾಲಿಸಿಸ್ ಸಹಯೋಗದಲ್ಲಿ “ಕಲಿಕೆಯೇ ಕಲ್ಯಾಣ” ಅಭಿಯಾನವನ್ನು ಆರಂಭಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶದ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶಿಕ್ಷಣದಲ್ಲಿ ತೀರ ವಿದ್ಯಾರ್ಥಿಗಳು ತೀರ ಹಿಂದುಳಿದಿದ್ದಾರೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿನ ಫಲಿತಾಂಶ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಎಷ್ಟರಮಟ್ಟಿಗೆ ಇದೆ ಎಂದು ತಿಳಿಸುತ್ತದೆ. ಅಲ್ಲದೇ ಈ ಭಾಗದಲ್ಲಿ ೨೧,೦೦೦ ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ಈ ಮೇಲಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಿ ಹಾಗೂ ಮೌಲಾನಾ ಆಜಾದ್ ಶಾಲೆಗಳನ್ನು ಗಮನದಲ್ಲಿಟ್ಟುಕೊಂಡು ಸಮುದಾಯ ಕೇಂದ್ರಿತ ಕಾರ್ಯತಂತ್ರವನ್ನು ರೂಪಿಸಲಾಗಿದೆ. ಸಾರ್ವಜನಿಕರಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವುದು, ಸಮುದಾಯದ ಬೆಂಬಲದಿAದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ಅನುತ್ತೀರ್ಣ ಮಟ್ಟವನ್ನು ತಗ್ಗಿಸುವುದು ಉದ್ದೇಶದಿಂದ ಈ ಅಭಿಯಾನವನ್ನು ಆರಂಭಿಸಲಾಗಿದ್ದು, ಸಾರ್ವಜನಿಕರು, ಶೈಕ್ಷಣಿಕ ರಂಗದಲ್ಲಿ ಕಾರ್ಯನಿರ್ವಹಿಸುವವರು, ರಾಜಕಾರಣಿಗಳು ಈ ಅಭಿಯಾನವನ್ನು ಬೆಂಬಲ ನೀಡಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಇಮ್ತಿಯಾಜ್, ತಾಲೂಕು ಅಧ್ಯಕ್ಷ ಅಮೀರ್ ಅಲ್ಲಾಭಕ್ಷ, ಅಬ್ದುಲ್ ನಹೀಂ, ಮೌಲಾನಾ ಅಬು ಸೈಯದ್ ಖಾಸ್ಮೀ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *