ಮಾನ್ವಿ : ಪಟ್ಟಣದ ಬಾಷುಮಿಯ್ಯ ಪದವಿ ಕಾಲೇಜ್ ಮುಂಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರ್ ಚಾಲಕ ವೀರೇಶ್ ಪಲ್ಲೆದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಟಗಿ ಪಟ್ಟಣದಲ್ಲಿ ಜೆಸ್ಕಾಂ ಕಚೇರಿಯಲ್ಲಿ ಗುತ್ತಿಗೆದಾರನಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರಟಗಿ ಮೂಲದ ವೀರೇಶ್ ಪಲ್ಲೆದ್ ಅವರು ಚಲಾಯಿಸುತ್ತಿದ್ದ ಕಾರ್‌ಗೆ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ ವೀರೇಶ್ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಾನ್ವಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಕಾರಣಗಳ ಕುರಿತು ಪೊಲೀಸರು ಪರಿಶೀಲನೆ ಕೈಗೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.


