‘ಫೆಬ್ರುವರಿಯಲ್ಲಿ ಜಿಲ್ಲೆಯ 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲು ನಿರ್ಧರಿಸಲಾಗಿದೆ’ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
‘ಕಲಬುರಗಿ ಪ್ರತಿಭಾವಂತರ ನೆಲವಾಗಿದೆ. ಇದು ಕಲೆ, ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿಯ ಕೇಂದ್ರವಾಗಿದ್ದು, ಶರಣರು, ಸೂಫಿ-ಸಂತರ ನಾಡಾಗಿದೆ.
ಸಾಮರಸ್ಯ ಮತ್ತು ಭಾವೈಕ್ಯದ ಬೀಡಾಗಿದೆ. ಯುವಜನರನ್ನು ಸಾಹಿತ್ಯದ ಕಡೆ ಆಕರ್ಷಿತರಾಗುವಂತೆ ಮಾಡಲು ಮತ್ತು ಸಾಹಿತ್ಯದ ಬೆಳವಣಿಗೆಗೆ ಕಾರಣವಾಗುವ ಉದ್ದೇಶದಿಂದ ಸಮ್ಮೇಳನ ಆಯೋಜಿಸಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆಯವರ ಜೊತೆ ಚರ್ಚಿಸಲಾಗಿದೆ. ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ಅರ್ಥಪೂರ್ಣವಾಗಿ ನಡೆಸಲು ಸೂಚಿಸಿದ್ದಾರೆ. ಕಸಾಪ ಸಭೆಯಲ್ಲಿ ಸಮ್ಮೇಳನದ ರೂಪುರೇಷಗಳ ಕುರಿತು ಚರ್ಚೆ ನಡೆಸಲಾಗಿದೆ. ಮುಂದಿನ ವಾರ ಸಮ್ಮೇಳನದ ಸ್ವಾಗತ ಸಮಿತಿ ರಚನೆ, ಸಮ್ಮೇಳನಾಧ್ಯಕ್ಷರ ಆಯ್ಕೆ ಕುರಿತು ತೀರ್ಮಾನಿಸಲಾಗುವುದು’ ಎಂದಿದ್ದಾರೆ.

Leave a Reply

Your email address will not be published. Required fields are marked *