ಮಸ್ಕಿ : ಸರ್ಕಾರ ರೈತರಿಗಾಗಿ ಬೀಜ, ಗೊಬ್ಬರ ಸೇರಿದಂತೆ ಹಲವಾರು ಸಬ್ಸಿಡಿ ಯೋಜನೆಗಳನ್ನು ನೀಡುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಸದೃಢ ರಾಗಬೇಕು ಎಂದು ಮಸ್ಕಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್ ಸಿದ್ದನಗೌಡ ತುರುವಿಹಾಳ ಹೇಳಿದರು.
ಮಸ್ಕಿ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಶನಿವಾರ ತಾಡಪಲ್ ಗಳನ್ನು ವಿತರಿಸಿ ನಂತರ ಮಾತನಾಡಿದ ಅವರು ಸರ್ಕಾರದಲ್ಲಿ ದೊರೆಯುವಂತ ಸಬ್ಸಿಡಿ ಯೋಜನೆಗಳನ್ನು ರೈತರಿಗೆ ಸಕಾಲದಲ್ಲಿ ವಿತರಿಸುವ ಅಗತ್ಯ ಕ್ರಮಗಳನ್ನು ಕೃಷಿ ಅಧಿಕಾರಿಗಳು ಕೈಗೊಳ್ಳಬೇಕು ಹಾಗೂ ಯಾವುದೇ ರೀತಿಯಲ್ಲಿ ರೈತರಿಗೆ ಅಲೆದಾಡಿಸುವ ಕೆಲಸ ಮಾಡಬಾರದು ಎಂದು ಹೇಳಿದರು. ರೈತರಿಗಾಗಿ ಬರುವ ಯಾವುದೇ ಯೋಜನೆಗಳಿರಲಿ ವಿಳಂಬ ಮಾಡದೆ ರೈತರಿಗೆ ತಲುಪಿಸುವ ಕೆಲಸ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಮಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿವಿಧ ಮುಖಂಡರು ಇದ್ದರು.
ಗ್ರಂಥಾಲಯಕ್ಕೆ ಆರ್ ಸಿದ್ದನಗೌಡ ಭೇಟಿ. ಮೂಲಸೌಕರ್ಯ ಪರಿಶೀಲನೆ
ಮಸ್ಕಿ ಪಟ್ಟಣದಲ್ಲಿರುವ ಹೈಟೆಕ್ ಡಿಜಿಟಲ್ ಗ್ರಂಥಾಲಯಕ್ಕೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರು ಸಿದ್ದನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಂಥಾಲಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳು ಒದಗಿಸಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಂಥಾಲಯದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ವಿದ್ಯಾರ್ಥಿಗಳು ಸಹ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅತ್ಯಂತ ಮುತುವರ್ಜಿ ವಹಿಸಿ ಓದಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಂಥಾಲಯದ ಅಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.


