ಜನವರಿ 22 ರಿಂದ 31ರವರೆಗೆ ಬೆಂಗಳೂರಿನಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ರಾಜಕೀಯ ಮುಖಂಡರು ಸಿಂಧನೂರು ಜಿಲ್ಲೆ ರಚನೆ ಕುರಿತೆ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಧ್ವನಿ ಎತ್ತಬೇಕು. ಹಾಗೂ ಮಾಜಿ ಸಚಿವರು, ಸಂಸದರು, ಶಾಸಕರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷರಾದ ದೇವೇಂದ್ರಗೌಡ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿಂಧನೂರು ತಾಲೂಕು ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಹಾಗೂ ಕಲಬುರ್ಗಿ ಜಿಲ್ಲೆಗಳ ಮಧ್ಯಭಾಗದಲ್ಲಿರುವ ಸಿಂಧನೂರು ಪ್ರಮುಖವಾದ ವಾಣಿಜ್ಯ ನಗರವಾಗಿದೆ. ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಹೊಂದುವ ಮೂಲಕ ಅತ್ಯಂತ ತೀವ್ರಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕವಾಗಿ, ವಿಶಿಷ್ಟತೆಯನ್ನು ಹೊಂದಿದೆ.

ತಾಲೂಕಿನಲ್ಲಿ ವಿವಿಧ ರಾಜ್ಯಗಳ ವಿವಿಧ ಸಂಸ್ಕೃತಿಗಳ ಜನರು ಬದುಕು ಕಟ್ಟಿಕೊಂಡು ಸಂತೃಪ್ತ ಜೀವನ ನಡೆಸುತ್ತಿದ್ದಾರೆ. ಜಿಲ್ಲಾ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ಎಂಜಿನಿಯರಿಂಗ್, ಡಿಪ್ಲೊಮಾ, ಎಂಜಿನಿಯರಿಂಗ್ ಕಾಲೇಜುಗಳು ಸೇರಿದಂತೆ ಜಿಲ್ಲಾ ಆಸ್ಪತ್ರೆಯೂ ಸಹ ಅಗತ್ಯವಿದ್ದು, ಇವುಗಳ ಬಗ್ಗೆ ನಮ್ಮ ಶಾಶಕದ್ವಯರು ಗಮನ ಹರಿಸಬೇಕು ಎಂದರು.

ನಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಜಂತ್ರಿ ಮಾತನಾಡಿ, ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಹಾಲಿ ಶಾಸಕರು, ಹಾಗೂ ವಿಧಾನ ಪರಿಷತ್ ಸದಸ್ಯರು ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯಬೇಕಾಗಿದೆ. ಅಲ್ಲದೇ ಮಾಜಿ ಸಚಿವರು, ಸಂಸದರು, ಶಾಸಕರು, ಸರ್ಕಾರಕ್ಕೆ ಪತ್ರ ಬರೆದು ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿಸಲು ಆಗ್ರಹಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ: ತಾಲೂಕು ಅಧ್ಯಕ್ಷ ಎಲ್.ರಾಜಾಸಾಬ್ ಗಾಂಧಿನಗರ, ನಗರ ಘಟಕದ ಅಧ್ಯಕ್ಷರಾದ ಆರ್.ಎಕ್ಸ್.ಸುರೇಶ, ತಾಲೂಕು ಉಪಾಧ್ಯಕ್ಷ ಬಸವರಾಜ, ಎಸ್.ಎಸ್.ಪಾಷಾ, ಸೇರಿದಂತೆ ಅನೇಕರಿದ್ದರು.

Leave a Reply

Your email address will not be published. Required fields are marked *