ರಾಯಚೂರು ಜನವರಿ 17 (ಕ.ವಾ.): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 17ರಂದು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾಲಿಬಾಲ್, ಕಬ್ಬಡಿ ಕ್ರೀಡಾಕೂಟಕ್ಕೆ ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಸಂತೋಷ ರಾಣಿ ಅವರು ಚಾಲನೆ ನೀಡಿದರು.
ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಂದ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸುಮಾರು 75 ತಂಡಗಳಾಗಿ ವಿವಿಧ ಕ್ರೀಡೆಯಲ್ಲಿ ಭಾಗಿಯಾದರು.
ಕಬ್ಬಡಿಯಲ್ಲಿ ಪುರುಷರ 20 ತಂಡಗಳು ಮತ್ತು ಮಹಿಳೆಯರ 10 ತಂಡಗಳು ಭಾಗಿಯಾಗಿದ್ದವು. ಅಲ್ಲದೆ ವಾಲಿಬಾಲನಲ್ಲಿ ಪುರುಷರ 25 ತಂಡಗಳು ಮತ್ತು ಮಹಿಳೆಯರ 20 ತಂಡಗಳು ಭಾಗಿಯಾಗಿದ್ದವು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಮಿತಿ ಕಾರ್ಯದರ್ಶಿ ಹಾಗೂ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣ ಶಾವಂತಗೇರಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ವೀರೇಶ ನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ರಂಗಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಪರುಶರಾಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸೂಪರಿಡೆಂಟ್ ಸಂತೋಷ್, ಚಂದ್ರಶೇಖರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.


