ತಾಳಿಕೋಟಿ: ದೇವರ ಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಮುಖಂಡ ಸಮಾಜ ಸೇವಕ ಬಸನಗೌಡ ಪಾಟೀಲ ಯಡಿಯಾಪೂರ ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪತ್ರಿಕಾ ರಂಗ ಪ್ರಜಾಪ್ರಭುತ್ವದ ನಾಲ್ಕನೇಯ ಅಂಗವಾಗಿದೆ, ಸಾಮಾಜಿಕ ಜವಾಬ್ದಾರಿಯನ್ನು ಹೊತ್ತು ಹಗಲಿರುಳು ಎನ್ನದೆ ಕೆಲಸ ಮಾಡುತ್ತಿರುವ ಪತ್ರಕರ್ತರ ಸೇವೆಯನ್ನು ಗುರುತಿಸಿ ಅವರನ್ನು ಗೌರವಿಸುವುದು ಸಮಾಜದ ಜವಾಬ್ದಾರಿಯಾಗಿದೆ ಈ ಹಿನ್ನೆಲೆಯಲ್ಲಿ ನಾನು ನಿಮ್ಮನ್ನು ಗೌರವಿಸುವಂತಹ ಕೆಲಸ ಮಾಡುತ್ತಿದ್ದೇನೆ. ಜನರ ಸೇವೆ ಮಾಡುವ ಉದ್ದೇಶದಿಂದ ನಾನು ಈ ಕ್ಷೇತ್ರಕ್ಕೆ ಬಂದಿದ್ದೇನೆ, ಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಕೆಲಸ ಮಾಡಿದ ಅನುಭವ ನನಗಿದೆ ಕಳೆದ 30 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ ಕಾಂಗ್ರೆಸ್ ಪಕ್ಷದಿಂದ ನನ್ನ ರಾಜಕೀಯ ಜೀವನ ಆರಂಭಿಸಿದ್ದು ಕಾರಣಾಂತರಗಳಿಂದ ಅಲ್ಲಿಂದ ಹೊರಬಂದು ಈಗ ಬಿಜೆಪಿಯ ಪಕ್ಷದಲ್ಲಿದ್ದು ಕೆಲಸ ಮಾಡುತ್ತಿದ್ದೇನೆ ನನಗೆ ಪ್ರತಿ ಹಂತದಲ್ಲಿಯೂ ನಿಮ್ಮ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನದ ಅಗತ್ಯವಿದೆ, ನನ್ನ ಈ ಸನ್ಮಾನವನ್ನು ಸ್ವೀಕರಿಸಿದ್ದಕ್ಕೆ ನಿಮಗೆಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು. ಸಮಾಜ ಸೇವಕ ಶರಣಗೌಡ ಪಾಟೀಲ (ಕರಿಭಾವಿ) ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪತ್ರಕರ್ತರಾದ ರವಿ ಕಟ್ಟಿಮನಿ,ಅಂಬಾಜಿ ಘೋರ್ಪಡೆ, ಅಬ್ದುಲ್ ಗನಿ ಮಕಾನದಾರ, ಪ್ರವೀಣ ಘೋರ್ಪಡೆ, ಸಂಜಯಸಿಂಗ್ ರಜಪೂತ,ಸಂಗನಗೌಡ ಗಬಸಾವಳಗಿ,ವಿಜಯ ಕಲಾಲ, ರಾಜೇಶ ಇನಾಮದಾರ, ಸುನೀಲ ಅಂಬಿಗೇರ, ಪ್ರವೀಣ ರೆಡ್ಡಿ, ಮುಖಂಡರಾದ ಕೆ.ಸಿ. ದೇಸಾಯಿ, ಗುತ್ತಿಗೆದಾರ ಕೆ ಶ್ರೀನಿವಾಸ ರೆಡ್ಡಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *