ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧೀನದಲ್ಲಿರುವ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ವಿಭಾಗಕ್ಕೆ 2025-26ನೇ ಸಾಲಿನಲ್ಲಿ ಲ್ಯಾಬ್ ಕನ್ಸೂಮೊಬೈಲ್ಸ್ಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದ್ದು, ಆಸಕ್ತರು ಜನವರಿ 23ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯದ ಟಿಬಿ ವಿಭಾಗದಲ್ಲಿ ಖುದ್ದಾಗಿ ವಿಚಾರಿಸಬಹುದು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
