ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದ ನಿವಾಸಿಯಾಗಿದ್ದ ಗಿರಿಯಮ್ಮ ವಿಜಯಾಚಾರ್(76) ನಿಧನರಾಗಿದ್ದಾರೆ.
ಕಳೆದ ಮರ‍್ನಾಲು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ರಾಯಚೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು, ಓರ್ವ ಸೊಸೆ ಹಾಗೂ ಇಬ್ಬರು ಮೊಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ನಗರದ ಬಿಆರ್‌ಬಿ ವೃತ್ತದಲ್ಲಿರುವ ಮುಕ್ತಿಧಾಮದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

