ತಾಳಿಕೋಟಿ : ತಾಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಕಲಾ ವೈಭವ ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಕೋಲಾರ ಪಟ್ಟದೇವರು ಹಿರೇಮಠದ ಪರಮ ಪೂಜ್ಯ ಶೀ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎನ್.ಬಿ.ನಡುವಿನಮನಿ,ಬಿಇಓ ಬಿ.ಎಸ್.ಸಾವಳಗಿ, ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರಮಠ,ಇಸಿಓ ಸುರೇಶ ಹಿರೇಮಠ ಹಾಗೂ ಸರ್ವಜ್ಞ ವಿದ್ಯಾಪೀಠದ ಅಧ್ಯಕ್ಷ ಸಿದ್ದನಗೌಡ ಮಂಗಳೂರ ಇದ್ದರು.

