ಕರ್ನಾಟಕದಲ್ಲಿ (Karnataka ) ಕಳೆದೆರೆಡು ದಿನಗಳಿಂದ ಚಳಿ (Winter ) ಹೆಚ್ಚಿದ್ದು, ಮೈ ಕೊರೆಯುವ ಥಂಡಿಗೆ ಜನರು ಗಢ ಗಢ ನಡುಗುತ್ತಿದ್ದಾರೆ.ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನ ಚಳಿ ಮುಂದುವರಿಯಲಿದ್ದು, ಇವತ್ತು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹಾಗೆಯೇ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.ಜನವರಿ 21ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗಲಿದ್ದು, ಚಳಿ ಕೂಡ ಹೆಚ್ಚಾಗಲಿದೆ ಎನ್ನಲಾಗಿದೆ. ಜನವರಿ ಅಂತ್ಯಕ್ಕೆ ಚಳಿ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.ಇನ್ನು,ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು