ಸಿಂಧನೂರು : ತಾಲೂಕಿನ ಬರ್ಮಾ ಕ್ಯಾಂಪ್ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿನಿ ಕುಮಾರಿ ಗುಣವರ್ದಿನಿ, ಪ್ರಸ್ತುತ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾಳೆ. ಇತ್ತೀಚೆಗೆ ಹೊನ್ನಾವರದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆತ, ಚಕ್ರ ಎಸೆತ ಹಾಗೂ 4×400 ಮೀ. ರೀಲೆ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಉತ್ತಮ ಸಾಧನೆಯನ್ನು ಮೆರೆದಿದ್ದಾಳೆ.
ಕುಮಾರಿ ಗುಣವರ್ದಿನಿಯ ಈ ಗಣನೀಯ ಸಾಧನೆಗೆ ಶಿಕ್ಷಕರಾದ ಶ್ರೀ ಉಮೇದ್ S.P, ಗ್ರಾಮದ ಗುರು-ಹಿರಿಯರು ಹಾಗೂ ಸ್ನೇಹಿತರು ಅಭಿನಂದನೆ ತಿಳಿಸಿದ್ದಾರೆ.
ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಶ್ರೀ ಲಾಜರ್ ಸಿರಿಲ್ ಜಿ, ಕುಮಾರಿ ಗುಣವರ್ದಿನಿಯ ಸಾಧನೆಯನ್ನು ಶ್ಲಾಘಿಸಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಘನತೆ ಗಳಿಸಿ ನಮ್ಮ ಗ್ರಾಮಕ್ಕೆ ಕೀರ್ತಿಯನ್ನು ತರಲಿ ಎಂದು ಹಾರೈಸಿದ್ದಾರೆ.
