ಮಾನ್ವಿ: ತಾಲೂಕಿನ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ, ನೌಕರರ ಪರವಾಗಿ ಬೆಂಬಲಕ್ಕೆ ನಿಲ್ಲುವಂತೆ ಕೋರಿ ಮಾನ್ವಿ ಶಾಸಕ ಜಿ. ಹಂಪಯ್ಯ ನಾಯಕ ಅವರಿಗೆ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಗುರುವಾರ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ, ಅವರ ಸುಪುತ್ರ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜಿ. ಗಂಗಣ್ಣ ನಾಯಕ ಅವರು ನೌಕರರ ಮನವಿ ಪತ್ರವನ್ನು ಸ್ವೀಕರಿಸಿದರು. ಮುಂಬರುವ ಅಧಿವೇಶನದಲ್ಲಿ ನೌಕರರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ನೌಕರರು ಇದೇ ವೇಳೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಗೋಪಾಲ್ ನಾಯಕ್ ನೀರ್ ಮಾನ್ವಿ, ಶರಣಬಸವ ನೀರ್ ಮಾನ್ವಿ, ಹನುಮೇಶ್ ನೀರ್ ಮಾನ್ವಿ ಸೇರಿದಂತೆ ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
