ರಾಯಚೂರು ಜನವರಿ 19 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಫೆಬ್ರವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದ ಅಂಗವಾಗಿ ಜನವರಿ 27ರಂದು ಗಂಟೆಗೆ ಸೈಕ್ಲಾಥಾನ್ ಆಯೋಜನೆ ಮಾಡಲಾಗಿದ್ದು, ಆಸಕ್ತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸೈಕ್ಲಿಂಗ್ ಮ್ಯಾರಥಾನ್‌ದ ನೋಡಲ್ ಅಧಿಕಾರಿ ಆಗಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ತಿಳಿಸಿದ್ದಾರೆ.
ಜನವರಿ 27ರ ಬೆಳಗ್ಗೆ 6 ಗಂಟೆಗೆ ಸೈಕ್ಲಾಥಾನ್ ಆಯೋಜನೆ ಮಾಡಲಾಗಿದೆ. ಪ್ರಥಮ ಬಹುಮಾನ 10 ಸಾವಿರ ಹಾಗೂ ದ್ವಿತೀಯ ಬಹುಮಾನ 5 ಸಾವಿರ ರೂ.ಗಳನ್ನು ನೀಡಲಾಗುವುದು. ಆಸಕ್ತರು ಈ ಸ್ಪರ್ಧೆಯ ನೋಡಲ್ ಅಧಿಕಾರಿಗಳಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರ ಮೊಬೈಲ್ ಸಂಖ್ಯೆ: 9972316895 ಅಥವಾ ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ವಿಜಯಶಂಕರ್ ಮೊಬೈಲ್ ಸಂಖ್ಯೆ: 9448427601ಗೆ ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ. ಅಥವಾ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಸಹ ನೊಂದಾಯಿಸಿಕೊಳ್ಳಬಹುದಾಗಿದೆ.
ಮ್ಯಾರಥಾನ್‌ವು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ ದಿಂದ ಆರಂಭವಾಗಿ ಬಸವೇಶ್ವರ ಸರ್ಕಲ್, ಲಿಂಗಸುಗೂರು ರೋಡ್, ಯಕ್ಲಾಸಪುರ್, ಯರಮಸರ್ ಬೈಪಾಸ್, ಓಪೆಕ್ ಆಸ್ಪತ್ರೆ, ಗಂಜ್ ಸರ್ಕಲ್, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪುವುದು.
ಸೈಕ್ಲಿಂಗ್ ಮ್ಯಾರಥಾನ್‌ದ ಆಸಕ್ತರು ಭಾಗವಹಿಸಿ ರಾಯಚೂರು ಜಿಲ್ಲೆ ಹೆಮ್ಮೆಪಡುವಂತಹ ಕ್ರೀಡೋತ್ಸವ ಮೂಡಿಬರಲು ಸಹಕರಿಸಿ ರಾಯಚೂರು ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲಾ ಕ್ರೀಡಾಪಟುಗಳು ಮತ್ತು ಸಾರ್ವಜನಿಕರಲ್ಲಿ ವಿನಂತಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *