ಸಿಂಧನೂರು : ಜ 19 ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಶ್ರೀಮತಿ ಭಾರತಿ ಹಾಗೂ ಕೃಷ್ಣೇಗೌಡ ಇವರು ನೆರವೇರಿಸಿ, ಸ್ವಾಮಿ ವಿವೇಕಾನಂದರ ಆದರ್ಶಗಳು, ಯುವಜನರ ಪಾತ್ರ, ಶಿಕ್ಷಣದ ಮಹತ್ವ ಹಾಗೂ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಹೊಣೆಗಾರಿಕೆ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಇರ್ಫಾನ್ ಕೆ. ಅತ್ತಾರ್ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಇರ್ಷಾದ್ ಕೆ ಅತ್ತಾರ್ ,ಪ್ರಾಚಾರ್ಯರಾದ ಶ್ರೀ ಸಿರಿಲ್, ಉಪನ್ಯಾಸಕರುಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ವಿಶೇಷ ಘನತೆ ತಂದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ


