‘ಸಾಮಾನ್ಯ ಜೀವನ ನಡೆಸಿದ ಮಹಾಯೋಗಿ ವೇಮನರ ಜೀವನ ಆದರ್ಶಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು’ ಎಂದು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು.
ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಯಚೂರು ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.’ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಬಾರದು. ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು. ಅಂದಾಗ ಜಯಂತಿಗಳ ಆಚರಣೆಗೆ ಮಹತ್ವ ಬರುತ್ತದೆ’ ಎಂದು ತಿಳಿಸಿದರು.

‘ರೆಡ್ಡಿ ಸಮಾಜದ ಬಂಧುಗಳ ಬೇಡಿಕೆಯಂತೆ ಸಿ.ಎ. ನಿವೇಶನ ಕೊಡಲಾಗಿದೆ. ಬರುವ ದಿನಗಳಲ್ಲಿ ವೇಮನ ಮಂದಿರ ನಿರ್ಮಾಣವಾಗಲಿದೆ. ವೇಮನ ಸಮುದಾಯ ಭವನ ನಿರ್ಮಾಣಕ್ಕೆ ₹ 10 ಲಕ್ಷ ಕೊಡಲಾಗುವುದು’ ಎಂದು ಭರವಸೆ ನೀಡಿದರು.

ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ ಮಾತನಾಡಿ, ‘ಮಹಾಯೋಗಿ ವೇಮನರು ಆಧ್ಯಾತ್ಮಿಕ ಜೀವನಕ್ಕೆ ಬರಲು ಹೇಮರೆಡ್ಡಿ ಮಲ್ಲಮ್ಮ ಅವರು ಕಾರಣರಾದರು. ಸಮಾಜದ ಏಳಿಗೆಗೆ ಅವರು ಶ್ರಮಿಸಿದ್ದು, ಎಲ್ಲ ಭಾರತೀಯರು ಸೇರಿ ವೇಮನ ಜಯಂತಿ ಆಚರಣೆ ಮಾಡಬೇಕು. ಹೇಮರೆಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನ ಆಚಾರ, ವಿಚಾರಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಕಾರ್ಯ ನಮ್ಮೆಲ್ಲರಿಂದ ಆಗಬೇಕು’ ಹೇಳಿದರು.

‘ಸಾಮಾಜಿಕ ಸಮಸ್ಯೆ ಮತ್ತು ಪಿಡುಗುಗಳ ನಿವಾರಣೆಯಲ್ಲಿ ಹಲವಾರು ಶ್ರೇಷ್ಠ ದಾರ್ಶನಿಕರು, ಸಂತರು, ಶರಣರು ಮಹತ್ವದ ಪಾತ್ರವಹಿಸಿದ್ದು, ಅದರಲ್ಲಿ ವೇಮನರ ಕೊಡುಗೆ ಗಮನಾರ್ಹವಾಗಿದೆ’ ಎಂದರು.

ಕಲಬುರಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾ ಘಟಕ ಅಧ್ಯಕ್ಷ ಮಹಿಪಾಲರೆಡ್ಡಿ ಉಪನ್ಯಾಸ ನೀಡಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ:

ಅತಿಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಾದ ಸ್ಪೂರ್ತಿ ನರಸಿಂಹ ರೆಡ್ಡಿ, ಸಾಯಿ ರಘುಪತಿ ರೆಡ್ಡಿ, ಆಕಾಂಕ್ಷಾ ಪ್ರಕಾಶ ರೆಡ್ಡಿ, ಅನನ್ಯ ವಿಕ್ರಮ ರೆಡ್ಡಿ, ಕೀರ್ತಿ ಪ್ರಾಣೇಶ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

ಕಚೇರಿಯ ತಹಶೀಲ್ದಾರ್ ಜಗದೀಶ, ಮಹಾನಗರ ಪಾಲಿಕೆಯ ಸಮಿತಿ ಕಾರ್ಯದರ್ಶಿ ಹಾಗೂ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣ ಶಾವಂತಗೇರಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ, ಸಮಾಜದ ಮುಖಂಡರಾದ ಜಿ.ರಾಮಚಂದ್ರ ರೆಡ್ಡಿ, ಅಚ್ಚುತ್ ರೆಡ್ಡಿ, ಡಾ.ಭೀಮನಗೌಡ, ಚಂದ್ರಶೆಖರ ರೆಡ್ಡಿ, ಭೀಮೇಶ್ ನಾಯ್ಕ, ರಾಮನಗೌಡ ಏಗನೂರು, ಕೇಶವ ರೆಡ್ಡಿ, ದಂಡಪ್ಪ ಬಿರಾದಾರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು