ತಾಳಿಕೋಟಿ ತಾಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಸೋಮವಾರ ಮಹಾಯೋಗಿ ಶ್ರೀ ವೇಮನ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಬಿ. ನಡುವಿನಮನಿ, ಉಪಾಧ್ಯಕ್ಷ ಆರ್ ಬಿ ನಡುವಿನಮನಿ, ನಿರ್ದೇಶಕ ಎಸ್ ಹೆಚ್ ಪಾಟೀಲ,ಮು.ಗು.ಡಾ.ವಿನಾಯಕ ಪಟಗಾರ, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

