ತಾಳಿಕೋಟಿ: ತಾಲೂಕಿನ ಬ.ಸಾಲವಾಡಗಿ ಗ್ರಾಮದವರಾದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯಡಿಯಾಪೂರ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸದ್ದಾಂ ಮಹೆಬೂಬ ಹಳ್ಳಿ( ದೇವರ ಹಿಪ್ಪರಗಿ)ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಕುಟುಂಬದ ಜವಾಬ್ದಾರಿ ಹೊತ್ತ ಸದ್ದಾಂ ಅವರ ಅಕಾಲಿಕ ಮರಣದಿಂದ ಕುಟುಂಬಕ್ಕೆ ತುಂಬಾ ತೊಂದರೆ ಯಾಗಿದೆ ಭಗವಂತ ಅವರಿಗೆ ಈ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ನನ್ನಿಂದ ಕೈಲಾದಷ್ಟು ಸಹಾಯ ಮಾಡಿದ್ದೇನೆ ಎಂದರು.ಈ ಸಮಯದಲ್ಲಿ ಸದ್ದಾಂ ಹಳ್ಳಿ ಕುಟುಂಬದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

