ಮುದ್ದೇಬಿಹಾಳ: ಕುಂಟೋಜಿ ಗ್ರಾಮ ಪಂಚಾಯತ್ ವತಿಯಿಂದ ಭಕ್ತ ಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಹುಲ್ಲೂರು ಮಾತನಾಡಿ, ಅಂಬಿಗರ ಚೌಡಯ್ಯನವರು ಬಸವಣ್ಣನವರ ಸಮಕಾಲೀನರಾದ ಮಹಾನ್ ವಚನಕಾರರಾಗಿದ್ದು, ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಜಾತಿ, ವರ್ಗ ಭೇದ, ಅಸಮಾನತೆ ಹಾಗೂ ಅಂಧಶ್ರದ್ಧೆಗಳ ವಿರುದ್ಧ ಧೈರ್ಯವಾಗಿ ಹೋರಾಟ ನಡೆಸಿದ ಶರಣರು ಎಂದರು. ಶ್ರಮದ ಗೌರವ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಅವರ ವಚನಗಳು ಇಂದಿನ ಸಮಾಜಕ್ಕೂ ಸಮಾನವಾಗಿ ಪ್ರಾಸಂಗಿಕವಾಗಿವೆ ಎಂದು ಹೇಳಿದರು.
ಗ್ರಾಮ ಪಂಚಾಯತ್ ಕಾರ್ಯದರ್ಶಿ ಗಿರೀಶ್ ಬಿರಾದರ ಮಾತನಾಡಿ, ಅಂಬಿಗರ ಚೌಡಯ್ಯನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾನತೆ, ಶಾಂತಿ ಮತ್ತು ಸಾಮಾಜಿಕ ನ್ಯಾಯ ಆಧಾರಿತ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *