ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುಚ್ಚಲದಿನ್ನಿ ಮತ್ತು ಮಿಡಗಲದಿನ್ನಿ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜನವರಿ 23ರ ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆವರೆಗೆ ಮಿಡಗಲದಿನ್ನಿ, ಪುಚ್ಚಲದಿನ್ನಿ, ಗುಂಜಳ್ಳಿ, ಉಪ್ರಾಳ, ಗೋಡಿಹಾಳ ಮತ್ತು ಅಲ್ಕೂರು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು