ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಸಮಾಜದಲ್ಲಿನ ಅನಾಚಾರ, ಅಪನಂಬಿಕೆಗಳನ್ನು ನಿರ್ಭೀತಿಯಿಂದ ಟೀಕಿಸಿ ಕ್ರಾಂತಿಕಾರಿ ಶರಣರು ಎಂದು ಹೆಸರಾದ ನಿಜಶರಣ ಅಂಬಿಗರ ಚೌಡಯ್ಯನವರ ಆಚಾರ-ವಿಚಾರಗಳನ್ನು ನಾವೆಲ್ಲರು ಅರಿತು ನಡೆಯಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಹೇಳಿದರು.
ಜನವರಿ 21ರ ಬುಧವಾರ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಅವರು ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಂಬಿಗರ ಚೌಡಯ್ಯನವರು ತಮ್ಮ ವಚನ ಸಾಹಿತ್ಯದ ಮೂಲಕ ಸಮಾಜದಲ್ಲಿ ಸಮಾನತೆಯನ್ನು ಎತ್ತಿ ಹಿಡಿದರು. ಬಸವಣ್ಣನವರ ಅನುಯಾಯಿಗಳಾದ ಅಂಬಿಗರ ಚೌಡಯ್ಯನವರ ವಚನಗಳಲ್ಲಿ ಜೀವನದ ಸಾರವೇ ಅಡಗಿದೆ ಎಂದು ತಿಳಿಸಿದರು.
ಈ ವೇಳೆ ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಮಾತನಾಡಿ, ಅಂಬಿಗರ ಚೌಡಯ್ಯನವರು ವಚನಗಳ ಮೂಲಕ ಸಮಸಮಾಜ ಕಟ್ಟುವ ಕೆಲಸ ಮಾಡಿದರು ಎಂದು ತಿಳಿಸಿದರು. ಬಹುಸಂಖ್ಯಾತರಾದ ಗಂಗಾಮಸ್ಥರಿಗೆ ಸಮಾಜದಲ್ಲಿ ಸರಿಯಾದ ರೀತಿಯಲ್ಲಿ ಪ್ರಾತಿನಿಧ್ಯ ಸಿಗಬೇಕು. ಈ ನಿಟ್ಟಿನಲ್ಲಿ ಸಮಾಜದ ಕೆಲಸ ಕಾರ್ಯಗಳನ್ನು ಪಕ್ಷಾತೀತವಾಗಿ ಮಾಡಲಾಗುತ್ತದೆ. ಸಮಾಜದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ದೊಡ್ಡದೊಡ್ಡ ಹುದ್ದೆಗಳನ್ನು ಅಲಂಕರಿಸಬೇಕು ಎಂದರು.
ಗಂಗಾಮತಸ್ಥ ಸಮಾಜದ ಜಿಲ್ಲಾಧ್ಯಕ್ಷರಾದ ಕೆ.ಶಾಂತಪ್ಪ ಅವರು ವಿಶೇಷ ಉಪನ್ಯಾಸ ನೀಡಿ, ಚೌಡಯ್ಯನವರು ಯಾವುದೇ ಜಾತಿಗೆ ಸೀಮಿತವಲ್ಲ. ಅವರು ಮೂರ್ತಿ ಪೂಜೆಗೆ ಅವಕಾಶ ಕೊಡಲಿಲ್ಲ. ಅಂತಹ ನೇರ ನಿಷ್ಟುರ ಅಂಬಿಗರ ಚೌಡಯ್ಯನವರ ತಿಳಿಸಿದ ಸನ್ಮಾರ್ಗದಲ್ಲಿ ನಾವು ನಡೆಯಬೇಕು. ಚೌಡಯ್ಯನವರು ಬಸವನ ತತ್ವವನ್ನು ಒಪ್ಪಿ ಅನುಭವ ಮಂಟಪಕ್ಕೆ ಹೋದರು. ಮೂಢನಂಬಿಕೆಯಲ್ಲಿ ನಾವು ಮುಳುಗಿ ಹೋಗಿದ್ದೇವೆ. ಅಂತಹ ಮೂಢನಂಬಿಕೆಗಳಿAದ ನಾವು ಹೊರ ಬರಬೇಕು. ನಮಗೆ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಇದ್ದು, ಆ ಗುರುಗಳ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು. ನಮ್ಮ ಆಚಾರ ವಿಚಾರ, ಸಂಸ್ಕೃತಿಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕು. ವಿದ್ಯಾರ್ಥಿಗಳಲ್ಲಿ ಸಂಸ್ಕಾರವನ್ನು ಕಲಿಸಬೇಕು. ಸಮಾಜದ ಬಗ್ಗೆ ತಿಳಿಹೇಳಬೇಕು ಎಂದರು.
ಸಮಾಜದ ವಿವಿಧ ಸಾಧಕರಿಗೆ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಗಣ್ಯರಿಂದ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ರಾಯಚೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂತೋಷ ರಾಣಿ, ಸಮಾಜದ ಮುಖಂಡರಾದ ಕೆ.ಶರಣಪ್ಪ, ಲಲಿತಾ ಕಡಗೋಳ, ಶರಣಪ್ಪ ಕಡಗೋಳ, ಕುರ್ಡಿ ಲಕ್ಷö್ಮಣ, ರಂಗ ದೇಸಾಯಿ, ರಾಜೇಶ್ವರಿ ಸೇರಿದಂತೆ ಇತರರು ಇದ್ದರು.
ಗಣ್ಯರಿಂದ ಮಾಲಾರ್ಪಣೆ: ವೇದಿಕೆಯ ಕಾರ್ಯಕ್ರಮಕ್ಕೂ ಮೊದಲು ನಗರದ ಬಿ.ಆರ್.ಬಿ. ಸರ್ಕಲ್ ಹತ್ತಿರವಿರುವ ಅಂಬಿಗರ ಚೌಡಯ್ಯನವರ ಪುತ್ಥಳಿ ನಡೆದ ಕಾರ್ಯಕ್ರಮದಲ್ಲಿ ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮೀಜಿ, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ ಹಾಗೂ ಸಚಿವರಾದ ಎನ್.ಎಸ್.ಬೋಸರಾಜು, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಸೇರಿದಂತೆ, ಮಾಜಿ ಸಂಸದರಾದ ಬಿ.ವಿ.ನಾಯಕ, ಮಾಜಿ ಶಾಸಕರಾದ ಎ.ಪಪ್ಪರೆಡ್ಡಿ, ರಾಯಚೂರು ನಗರಸಭೆಯ ಮಾಜಿ ಅಧ್ಯಕ್ಷರಾದ ಲಲಿತಾ ಕಡಗೋಳ, ಮುಖಂಡರಾದ ಕೆ.ಶಾಂತಪ್ಪ, ಕೆ.ಶರಣಪ್ಪ, ಕುರ್ಡಿ ಲಕ್ಷö್ಮಣ, ಹೊನ್ನಪ್ಪ, ಶ್ರೀನಿವಾಸ್, ಪಿ.ಪರಮೇಶ್, ಕೆ.ತಿಮ್ಮಪ್ಪ, ಪಿ.ಈರೇಶ, ಈರೇಶ ಜಾಲಗೇರಿ, ಕೆ.ನರಸಿಂಹ, ಇ.ಶಿವರಾಮ್, ಹನುಮಂತು ಕಡಗೋಳ ಸೇರಿದಂತೆ ಇತರರು ಅಂಬಿಗರ ಚೌಡಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

Leave a Reply

Your email address will not be published. Required fields are marked *