ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 5ರಿಂದ ಫೆಬ್ರವರಿ 7ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಕಾರ್ಯಕ್ರಮದ ಪ್ರಚಾರದ ಪೋಸ್ಟರ್, ಬ್ಯಾನರ್, ಕಾರ್ಯಕ್ರಮದ ವೇಳಾಪಟ್ಟಿ ಸೇರಿದಂತೆ ಇನ್ನೀತರ ಕಾರ್ಯಕ್ರಮಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಚಾಲನೆ ನೀಡಿದರು.
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 21ರಂದು ನಡೆದ ಕಾರ್ಯಕ್ರಮದಲ್ಲಿ ಉತ್ಸವದ ನಿಮಿತ್ತ ಫೆ.5ರವರೆಗೆ ನಿರಂತರ ನಡೆಯುವ ಬೇರೆ ಬೇರೆ ಕಾರ್ಯಕ್ರಮಗಳ ಮಾಹಿತಿಯ ಮತ್ತು ಫೆಬ್ರವರಿ 5, ಫೆಬ್ರವರಿ 6 ಮತ್ತು ಫೆಬ್ರವರಿ 7ರಂದು ಬೆಳಗ್ಗೆಯಿಂದ ಸಂಜೆವರೆಗೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಜಿಲ್ಲಾ ರಂಗಮಂದಿರ, ಜಿಲ್ಲಾ ಕ್ರೀಡಾಂಗಣ, ಮಹಿಳಾ ಸಮಾಜ ಆವರಣ ಸೇರಿದಂತೆ ವಿವಿಧೆಡೆ ನಡೆಯುವ ನಾನಾ ಕಾರ್ಯಕ್ರಮಗಳ ಸಮಗ್ರ ಮಾಹಿತಿಯ ಪೋಸ್ಟರನ್ನು ಸಚಿವರು ಬಿಡುಗಡೆ ಮಾಡಿದರು.
ರಾಯಚೂರು ಉತ್ಸವದ ನಿಮಿತ್ತ ಮಕ್ಕಳ ಹಬ್ಬ-2026ರ ಹಿನ್ನೆಲೆಯ ನಾನಾ ಕಾರ್ಯಕ್ರಮಗಳ ಪೋಸ್ಟರ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ.5 ರಿಂದ ಫೆ.7ರವರೆಗೆ ನಡೆಯುವ ಫಲ ಪುಷ್ಪ ಪ್ರದರ್ಶನ ಮತ್ತು ಮತ್ಸ್ಯ ಮೇಳ, ಪಂಚ ಗ್ಯಾರಂಟಿ ಮೇಳ, ಆಹಾರ ಮೇಳ, ಉದ್ಯೋಗ ಮೇಳ, ಕ್ರೀಡಾ ಕೂಟ, ಕರಕುಶಲ, ಕೈಗಾರಿಕೆ, ಪುಸ್ತಕ ಪ್ರದರ್ಶನ ಹಾಗೂ ಚಿತ್ರ ಸಂತೆ, ಸ್ಥಳೀಯ ಕಲಾವಿದರು ಸೇರಿದಂತೆ ರಾಜ್ಯದ ಹೆಸರಾಂತ ಕಲಾವಿದರಿಂದ ನಡೆಯುವ ನಾನಾ ಕಾರ್ಯಕ್ರಮಗಳ ಮಾಹಿತಿಯ ಪೋಸ್ಟರ್, ಫೆ.4 ರಿಂದ ಫೆ.9ರವರೆಗೆ ರಾಯಚೂರು ಜಿಲ್ಲೆಯ ನಾಗರಿಕರಿಗೆ ಬಾನಂಗಳದಿAದ ರಾಯಚೂರು ವೀಕ್ಷಣೆಗೆ ರಾಯಚೂರು ಬೈ ಸ್ಕೈ ವಿಶೇಷ ಹೆಲಿಕ್ಯಾಪ್ಟರ್ ರೈಡ್ ಕಾರ್ಯಕ್ರಮದ ಮಾಹಿತಿಯ ಪೋಸ್ಟರಗೆ, ಜನವರಿ 28ರಂದು ಕಲ್ಯಾಣ ಕರ್ನಾಟಕ ಭಾಗದ ದೇಹದಾರ್ಢ್ಯ ಬಾಡಿ ಬಿಲ್ಡಿಂಗ್ ಸ್ಪರ್ಧೆಯ ಮಿಸ್ಟರ್ ಕಲ್ಯಾಣ ಕರ್ನಾಟಕ -2026 ಪುರುಷರ ದೇಹದಾರ್ಢ್ಯ ಸ್ಪರ್ಧೆಯ ಪೋಸ್ಟರ್ ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾಲಯವು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಫೆ.5 ರಿಂದ ಫೆ.7ರವರೆಗೆ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ಕೃಷಿ ಮೇಳ 2026ರ ಸಮಗ್ರ ಕೃಷಿ ಸ್ವಾವಲಂಬಿ ಕೃಷಿ ಮೇಳದ ಪ್ರಮುಖ ಆಕರ್ಷಣೀಯ ಮಾಹಿತಿ ಪೋಸ್ಟರನ್ನು ಸಚಿವರು ಇದೆ ವೇಳೆ ಬಿಡುಗಡೆ ಮಾಡಿದರು.
ಬಲೂನ್ ಹಾರಾಟಕ್ಕೆ ಚಾಲನೆ: ಎಡೆದೊರೆ ನಾಡು ರಾಯಚೂರು ಉತ್ಸವ ಪ್ರಚಾರದ ವಿಶೇಷ ಆಕರ್ಷನೀಯವಾದ ಬಲೂನ್ ಹಾರಾಟಕ್ಕೆ ಸಚಿವರು ಇದೆ ವೇಳೆ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಈಶ್ವರ್ ಕಾಂದೂ, ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕೀಶೋರ್ ಪಾಟೀಲ, ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ರೈತ ಸಂಘದ ಅಧ್ಯಕ್ಷರಾದ ಚಾಮರಸ ಪಾಟೀಲ, ರಾಜ್ಯ ನೀತಿ ಆಯೋಗದ ಸದಸ್ಯರಾದ ಡಾ.ರಝಾಕ್ ಉಸ್ತಾದ್, ಮಹಾನಗರ ಪಾಲಿಕೆಯ ಸಮಿತಿಯ ಕಾರ್ಯದರ್ಶಿ ಹಾಗೂ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣ ಶಾವಂತಗೇರಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂತೋಷ ರಾಣಿ, ತಹಸೀಲ್ದಾರರಾದ ಸುರೇಶ ವರ್ಮಾ, ಅಮರೇಶ ಬಿರಾದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ವೀರೇಶ ನಾಯಕ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಆಹ್ವಾನ ಪತ್ರಿಕೆ, ಕರಪತ್ರ, ನೆನಪಿನ ಕಾಣಿಕೆ, ಪಾಸು, ಪ್ರಮಾಣ ಪತ್ರ, ಬ್ಯಾನರ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತನ ಮುಖ್ಯ ಯೋಜನಾಧಿಕಾರಿಗಳಾದ ಡಾ.ಟಿ.ರೋಣಿ ಅವರು ಸ್ವಾಗತಿಸಿದರು. ಮುರಳೀಧರ ಕುಲಕರ್ಣಿ ಅವರು ನಿರೂಪಿಸಿದರು.
ಸಮಾರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ನಗರದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಪತ್ರಕರ್ತರು ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.
ಆಹ್ವಾನ ಪತ್ರಿಕೆ, ಕರಪತ್ರ, ನೆನಪಿನ ಕಾಣಿಕೆ, ಪಾಸು, ಪ್ರಮಾಣ ಪತ್ರ, ಬ್ಯಾನರ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು, ಸದಸ್ಯ ಕಾರ್ಯದರ್ಶಿಗಳಾದ ಬಿಸಿಎಂ ಇಲಾಖೆಯ ಅಧಿಕಾರಿಗಳು, ಸದಸ್ಯರಾದ ಉಪ ಪೊಲೀಸ್ ಅಧೀಕ್ಷಕರು, ಮಾನವಿ ಹಾಗೂ ಸಿರವಾರ ತಹಸೀಲ್ದಾರರು, ವೃತ್ತ ಪೊಲೀಸ್ ನಿರೀಕ್ಷಕರು, ನಗರಾಭಿವೃದ್ಧಿ ಕೋಶದ ಗ್ರೇಡ್ 2 ತಹಸೀಲ್ದಾರರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರು ಈ ಕಾರ್ಯಕ್ರಮಕ್ಕೆ ಅಗತ್ಯ ಏರ್ಪಾಡು ಮಾಡಿದ್ದರು.


