ವಿಜಯಪುರ : ದೇವರಹಿಪ್ಪರಗಿ ಮತಕ್ಷೇತ್ರದ ಯಾಳವಾರ ಗ್ರಾಮದ ಸಾಮಾನ್ಯ ಕುಟುಂಬದಿಂದ ಹೊರಹೊಮ್ಮಿ, ಗುತ್ತಿಗೆ ಕಾಮಗಾರಿಗಳ ಕ್ಷೇತ್ರದಲ್ಲಿ ಗುಣಮಟ್ಟದ ಕಾರ್ಯಗಳ ಮೂಲಕ ಅವರು ವಿಶಿಷ್ಟ ಹೆಸರು ಗಳಿಸಿದ್ದರು.
ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ನಾಡಿನ ಅನೇಕ ಹೆಸರಾಂತ ಕಾಮಗಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಯುವ ಗುತ್ತಿಗೆದಾರರಿಗೆ ಅವರು ಮಾದರಿಯಾಗಿದ್ದರು.
ಶೈಕ್ಷಣಿಕ ಹಾಗೂ ಧಾರ್ಮಿಕ ಚಟುವಟಿಕೆಗಳಿಗೆ ಅಪಾರ ಕೊಡುಗೆ ನೀಡುವ ಮೂಲಕ ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿದ್ದ ಅವರು, ಬಡವರಿಗೂ ಅಗತ್ಯ ಸಮಯದಲ್ಲಿ ಸಾಕಷ್ಟು ನೆರವು ನೀಡಿದ್ದರು. ತಮ್ಮ ಜನಪರ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳಿಂದ ಜನಮನದಲ್ಲಿ ಶಾಶ್ವತ ಸ್ಥಾನ ಪಡೆದಿದ್ದರು.
ಯಂಕಂಚಿ ದಾವಲಮಲಿಕರ ಭಕ್ತರಾಗಿದ್ದ ಅವರು, ವಿನಮ್ರತೆ, ಶಿಸ್ತು, ಪ್ರಾಮಾಣಿಕತೆ, ಕಠಿಣ ಪರಿಶ್ರಮ ಮತ್ತು ದೂರದೃಷ್ಟಿಯ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಿದ್ದರು. ಅವರ ಆದರ್ಶಮಯ ಜೀವನ ಮತ್ತು ವ್ಯಕ್ತಿತ್ವ ಸದಾ ಸ್ಮರಣೀಯವಾಗಿರಲಿದೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗಕ್ಕೂ, ಬಂಧು–ಮಿತ್ರರಿಗೂ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Leave a Reply

Your email address will not be published. Required fields are marked *