ಮಸ್ಕಿ: ಶೈಕ್ಷಣಿಕ, ಆರ್ಥಿಕ, ಆರೋಗ್ಯ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ವಿಕಲಚೇತನರು ಹಾಗೂ ಅವರ ಪೋಷಕರು ಹಲವಾರು ರೀತಿಯ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ದು, ತಹಶೀಲ್ದಾರರ ಅಧ್ಯಕ್ಷೆಯಲ್ಲಿ ಕುಂದುಕೊರತೆ ಸಭೆ ನಡೆಸುವಂತೆ ಕರ್ನಾಟಕ ರಾಜ್ಯ ವಿಕಲಚೇತನರ ಆರ್‌ಪಿಡಿ ಟಾಸ್ಕ್ಪೋರ್ಸ ವತಿಯಿಂದ ಉಪ ತಹಶೀಲ್ದಾರ್‌ಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.
ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ ೨೦೧೬ ಜಾರಿಗೆ ಬಂದ ನಂತರ ಕರ್ನಾಟಕ ರಾಜ್ಯ ಸರ್ಕಾರ ವಿಕಲಚೇತನರ ಅಭಿವೃದ್ಧಿಗಾಗಿ ಹಲವಾರು ಸೌಲಭ್ಯಗಳನ್ನು ಒದಗಿಸಲು ಕಳೆದ 10 ವರ್ಷಗಳಿಂದ ಸುಮಾರು ಸುತ್ತೋಲೆ ಗಳನ್ನು ಹೊರಡಿಸಿದೆ. ಆದರೆ ಸರ್ಕಾರ ಹೊರಡಿಸಿದ ಸುತ್ತೋಲೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಕೆಳ ಹಂತದ ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದು, ಇದರಿಂದ ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ. ತಾಲೂಕಿನಲ್ಲಿ ವಿಕಲಚೇತನರ ಹಕ್ಕುಗಳು ಉಲ್ಲಂಘನೆಯಾಗುತ್ತಿವೆ. ಆದ್ದರಿಂದ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲಿ ತಾಲೂಕ ಮಟ್ಟದ ವಿಕಲಚೇತನರ ಕುಂದುಕೊರತೆಗಳ ಸಭೆ ನಡೆಸಬೇಕೆಂದು ಮನವಿ ಮಾಡಿಕೊಂಡರು.
ಸAದರ್ಭದಲ್ಲಿ ವಿಕಲಚೇತನರ ಸಂಘದ ತಾಲೂಕ ಅಧ್ಯಕ್ಷ ರಾರಾಯಣಪ್ಪ, ಆನಂದ, ರಾಯಪ್ಪ, ಮಲ್ಲೇಶ, ಜಯಮ್ಮ ಇದ್ದರು. ಮಸ್ಕಿ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ವಿಕಲಚೇತನರ ಕುಂದುಕೊರತೆ ಸಭೆ ನಡೆಸಲು ಒತ್ತಾಯಿಸಿ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *