ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 28ರ ಸಂಜೆ 4 ಗಂಟೆಯಿಂದ 6 ಗಂಟೆವರೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮೀಸ್ಟರ್ ಕಲ್ಯಾಣ ಕರ್ನಾಟಕ-2026ರ ಪುರುಷರ ದೇಹದಾರ್ಢ್ಯ ಬಾಡಿ ಬಿಲ್ಡಿಂಗ್ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಬಾಡಿ ಬಿಲ್ಡರಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

