ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): ಜನವರಿ 30ರಿಂದ ಫೆಬ್ರವರಿ 13ರವರೆಗೆ ರಾಯಚೂರು ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನವು ಅಚ್ಚುಕಟ್ಟಾಗಿ ನಡೆಯಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಈ ಬಗ್ಗೆ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜನವರಿ 21ರ ಬುಧವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಹದ ಮೇಲಿನ ಸ್ಪರ್ಶಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು, ನರ ಮತ್ತು ಚರ್ಮದ ಖಾಯಿಲೆಯಾದ ಕುಷ್ಠರೋಗವನ್ನು ನಿರ್ಮೂಲನೆ ಮಾಡಲು ನಾವೆಲ್ಲರೂ ಪಣತೊಡಬೇಕು. ಶತ ಶತಮಾನಗಳಿಂದ ಕಾಡುತ್ತಿರುವ ಈ ಕುಷ್ಠರೋಗವನ್ನು ನಿರ್ಮೂಲನೆ ಮಾಡಬೇಕು. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಸ್ಪರ್ಶ್ ಕುಷ್ಠರೋಗ ಬಗ್ಗೆ ಅರಿವು ಮೂಡಿಸಬೇಕು. ಕುಷ್ಟರೋಗವನ್ನುಗಿದ್ದು, ಇದನ್ನು ಮಾತ್ರೆಗಳ ಮೂಲಕ ಸಂಪೂರ್ಣ ಗುಣಪಡಿಸಬಹುದಾಗಿದ್ದು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ಲಭ್ಯ ಎಂಬುದನ್ನು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದರು.
ಶಾಪದಿಂದ ಬರುತ್ತದೆ ಎಂಬ ಜನರಲ್ಲಿ ತಪ್ಫು ನಂಬಿಕೆಯನ್ನು ಹೊಗಲಾಡಿಸಿ, ಇದು ಮೈಕೊ ಬ್ಯಾಕ್ಟಿರಿಯಂ ಲೇಪ್ರೆ ಎಂಬ ಸೂಕ್ಷ್ಮಾಣುವಿನಿಂದ ಬರುವ ಹಾಗೂ ಖಾಯಿಲೆ ಹೊಂದಿದ ವ್ಯಕ್ತಿ ಕೆಮ್ಮಿದಾಗ, ಸಿನಿದಾಗ ಬ್ಯಾಕ್ಟಿರಿಯಾವು ಉಸಿರಿನ ಮೂಲಕ ಜೊತೆಗಿರುವವರಿಗೆ ದೀರ್ಘಾವಧಿಯಲ್ಲಿ ಬರುವ ಬಗ್ಗೆ ತಿಳಿಸುವ ಒಂದು ವೇಳೆ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದರೆ ತಕ್ಷಣವೇ ವೈದ್ಯರ ಬಳಿ ಪರೀಕ್ಷೆ ಮಾಡಿಸಿ ಖಚಿತ ಪಟ್ಟರೆ ದೇಹದ ಮೇಲಿನ ಮಚ್ಚೆಗಳ ಆಧಾರದ ಮೇಲೆ 6 ತಿಂಗಳಿನಿಂದ ಒಂದು ವರ್ಷ ಉಚಿತವಾದ ಚಿಕಿತ್ಸೆಯೊಂದಿಗೆ ಸಂಪೂರ್ಣ ವಾಸಿಯಾಗುತ್ತದೆ ಎಂಬುದನ್ನು ಮನವರಿಕೆ ಮಾಡಿ ಎಂದರು.
ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಶಾಲೆಗಳಲ್ಲಿ ಮಕ್ಕಳಿಗೆ, ಗ್ರಾಮ ಪಂಚಾಯತ ಸದಸ್ಯರಿಗೆ ಸ್ತ್ರೀ-ಶಕ್ತಿ ಸಂಘ, ಯುವಕ-ಯುವತಿ ಸಂಘ, ವಿವಿಧ ಸಂಸ್ಥೆಗಳ ಸದಸ್ಯರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಈ ವೇಳೆ ಕುಷ್ಠರೋಗ ಜನಜಾಗೃತಿಯ ಭಿತ್ತಿಪತ್ರ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸುರೇಂದ್ರ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ವಿಜಯಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ ಬಡಿಗೇರ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ್ ಕೆ.,ಡಿಪಿಡಿಓ ಡಾ.ಚಂದ್ರಶೇಖರಯ್ಯ, ಜಿಲ್ಲಾ ಎನ್‌ಪೋರ್ಸ್ಮೆಂಟ್ ಅಧಿಕಾರಿ ಡಾ.ಶಿವಕುಮಾರ್, ಜಿಲ್ಲಾ ಕಾರಗೃಹದ ಅಧಿಕ್ಷಕರಾದ ಅನೀತಾ ಎಸ್ ಹಿರೇಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಡ್ಯಾಪ್ಕೋ ಮೇಲ್ವಿಚಾರಕ ಮಲ್ಲಯ್ಯ ಮಠಪತಿ, ಡಿವೈಹೆಚ್‌ಇಓ ಬಸಯ್ಯ, ಹೆಚ್‌ಐಓ ದೊಡ್ಡಮನಿ ಬಿಬಿ, ಎಲ್‌ಟಿಓ ಸಾಯಿರಾಬಾನು, ಮೃತ್ಯುಂಜಯ, ಎಪಡಮಲಾಜಿಷ್ಟ್ ಶ್ರೀನಿವಾಸ್, ಶಾಂತಕುಮಾರ್, ಹೊಸಬೆಳಕು ಸಂಸ್ಥೆಯ ಈರಣ್ಣ, ನಾಯಕ್, ಜ್ಞಾನಕುಮಾರಿ, ನಾಗರಾಜ ರತಕಲ್ಲ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.


