ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಇಡಪನೂರು ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜನವರಿ 23ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 03 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
