ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): 2024-25ನೇ ಸಾಲಿನ ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ (ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತ್) ಪ್ರಶಸ್ತಿ ನೀಡುವ ಕುರಿತು ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಿಂದ ಒಂದು ಗ್ರಾಮ ಪಂಚಾಯತ್‌ಗೆ 25,000 ರೂ.ಗಳಂತೆ ಪ್ರಶಸ್ತಿ ನೀಡಲು ಸಿದ್ಧಪಡಿಸಿರುವ ಮಾನದಂಡಗಳಂತೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲು ಅನುವಾಗುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡಂತೆ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಪ್ರಶಸ್ತಿಗೆ ಅರ್ಹ ಗ್ರಾಮ ಪಂಚಾಯಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತಾವನೆಯನ್ನು ಸಲ್ಲಿಸುವ ಗ್ರಾಮ ಪಂಚಾಯತ್‌ಗಳಲ್ಲಿ ಕಳೆದ 03 ವರ್ಷಗಳ ಹಿಂದಿನ 7ರಿಂದ 8 ವರ್ಷಗಳ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳು ಕೈಗೊಂಡ ಕ್ರಮಗಳಿಂದ ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮಗಳ ಫಲವಾಗಿ 2022-23, 2023-24, 2024-25ನೇ ಸಾಲಿನಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆದಿರಬಾರದು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಲೆಯಲ್ಲಿ ಮಕ್ಕಳ ರಕ್ಷಣೆಗಾಗಿ ವಿನೂತನ ಕ್ರಮಗಳನ್ನು ಕೈಗೊಂಡು ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯ್ತಿಗಳ ಪ್ರಸ್ತಾವನೆಯನ್ನು ಒಂದು ವಾರದೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಲಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಯಲಯ ಮ.ನಂ. 1-9-138 ಮಾರೆಮ್ಮ ದೇವಸ್ಥಾನದ ಹತ್ತಿರ, ಆಜಾದ ನಗರ ರಾಯಚೂರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08532-226226ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
