ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ತಾಲ್ಲೂಕು ಕಾರ್ಯಕ್ರಮ ಸಂಯೋಜಕರ ಒಂದು ಹುದ್ದೆ ಖಾಲಿಯಿದ್ದು, ಈ ಹುದ್ದೆಯು ನೇರಗುತ್ತಿಗೆ ಅಥವಾ ಗೌರವಧನ ಸೇವೆಯ ಆಧಾರದಲ್ಲಿ ನೇಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಯಾವುದಾದರೂ ಪದವಿ ಹೊಂದಿರತಕ್ಕದ್ದು, 2 ವರ್ಷದ ತಾಂತ್ರಿಕ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಕಡ್ಡಾಯ ಹೊಂದಿರತಕ್ಕದ್ದು, ಸ್ಥಳೀಯ ಅಭ್ಯರ್ಥಿಗೆ ಆದ್ಯತೆ ನೀಡಲಾಗುವುದು, ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ ಹಾಗೂ ಶಿಶು ಅಭಿವೃದ್ಧಿ ಯೋಜನೆಯ ತುರ್ವಿಹಾಳ ಕಚೇರಿಯಲ್ಲಿ ಪಡೆದು ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಕಚೇರಿ ಸಮಯದಲ್ಲಿ ಜನವರಿ 31ರ ಸಂಜೆ 05.30ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಯಚೂರು, ದೂರವಾಣಿ ಸಂಖ್ಯೆ: 08532-295646 ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತುರ್ವಿಹಾಳ ಕಚೇರಿ ಇವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
