ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.5 ರಿಂದ ಫೆ.7ರವರೆಗೆ ರಾಯಚೂರು ಜಿಲ್ಲೆಯಲ್ಲಿ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಚಾರಾರ್ಥ ಸಿದ್ಧಪಡಿಸಿದ ವಿಶೇಷ ವೆಬ್‌ತಾಣವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಜನವರಿ 21ರಂದು ಲೋಕಾರ್ಪಣೆ ಮಾಡಿದರು.
ಉತ್ಸವದ ಪ್ರಚಾರ ಸಮಿತಿಯು ಸಿದ್ಧಪಡಿಸಿರುವ ಈ ವೆಬ್‌ತಾಣದಲ್ಲಿ ಉತ್ಸವದ ಎಲ್ಲ ಕಾರ್ಯಕ್ರಮಗಳ ಸಂಕ್ಷಿಪ್ತ ಮಾಹಿತಿ, ಛಾಯಾಚಿತ್ರಗಳು, ಪೋಸ್ಟರ್, ವಿಶೇಷ ವಿಡಿಯೋಗಳು, ಪ್ರತಿ ದಿನ ನಡೆಯುವ ವಿವಿಧ ಚಟುವಟಿಕೆಗಳ ವಿವರ ಸೇರಿದಂತೆ ಉತ್ಸವ ನಾನಾ ಕಾರ್ಯಕ್ರಮಗಳ ಮಾಹಿತಿಗಾಗಿ www.raichurutsava.com ಲಿಂಕ್ ಬಳಸಿ ವೆಬ್‌ತಾಣಕ್ಕೆ ಭೇಟಿ ನೀಡಬಹುದಾಗಿದೆ. ನಮ್ಮ ಜಿಲ್ಲೆ ಸೇರಿದಂತೆ ರಾಜ್ಯದ ಯಾವುದೇ ಕಡೆಗಳಲ್ಲಿನ ಜನತೆ ಮತ್ತು ವಿಶ್ವದ ಯಾವುದೇ ಭಾಗದಲ್ಲಿನ ಜನತೆ ಈ ವೆಬ್‌ತಾಣಕ್ಕೆ ಭೇಟಿ ನೀಡಿ ಉತ್ಸವದ ಮಾಹಿತಿ ಪಡೆಯಲು ಮತ್ತು ಉತ್ಸವದಲ್ಲಿ ಭಾಗಿಯಾಗಲು ಅನುಕೂಲವಾಗುವಂತೆ ಈ ವೆಬ್‌ಸೈಟ್ ರಚಿಸಲಾಗಿದೆ ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಈಶ್ವರ್ ಕಾಂದೂ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕೀಶೋರ್ ಪಾಟೀಲ, ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ರೈತ ಸಂಘದ ಅಧ್ಯಕ್ಷರಾದ ಚಾಮರಸ ಪಾಟೀಲ, ರಾಜ್ಯ ನೀತಿ ಆಯೋಗದ ಸದಸ್ಯರಾದ ಡಾ.ರಝಾಕ್ ಉಸ್ತಾದ್, ಮಹಾನಗರ ಪಾಲಿಕೆಯ ಸಮಿತಿಯ ಕಾರ್ಯದರ್ಶಿ ಹಾಗೂ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣ ಶಾವಂತಗೇರಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂತೋಷ ರಾಣಿ, ವಾರ್ತಾ ಇಲಾಖೆಯ ಗವಿಸಿದ್ದಪ್ಪ ಹೊಸಮನಿ, ತಹಸೀಲ್ದಾರರಾದ ಸುರೇಶ ವರ್ಮಾ, ಅಮರೇಶ ಬಿರಾದಾರ ಸೇರಿದಂತೆ ಇನ್ನೀತರರು ಇದ್ದರು.

Leave a Reply

Your email address will not be published. Required fields are marked *