ಸಿಂಧನೂರು : ತಾಲೂಕು ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಉದ್ದೇಶ ಮತದಾನದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವುದು
ಕಾರ್ಯಕ್ರಮದಲ್ಲಿ ಮಾನ್ಯ ತಹಶೀಲ್ದಾರ್ ಶ್ರೀ ಅರುಣಕುಮಾರ್ ದೇಸಾಯಿ ಅವರು ಮಾತನಾಡಿ, ಮತದಾನದ ಕುರಿತು ಜಾಗೃತಿ ಮೂಡಿಸಿದರು. ಮತದಾರರ ದಿನಾಚರಣೆಯನ್ನು ಯಾಕೆ ಆಚರಿಸಲಾಗುತ್ತದೆ ಎಂಬುದನ್ನು ವಿವರಿಸಿ, ಪ್ರತಿಯೊಬ್ಬ ಅರ್ಹ ನಾಗರಿಕನು ತನ್ನ ಮತದಾನ ಹಕ್ಕನ್ನು ಕಡ್ಡಾಯವಾಗಿ ಬಳಸಬೇಕು ಎಂದು ತಿಳಿಸಿದರು. ಮತದಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಉತ್ತಮ ಆಡಳಿತ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ಅದೇ ಸಂದರ್ಭದಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀಮತಿ ರೂಪಾ ವಗ್ಗ ಅವರು ಮಾತನಾಡಿ, ಮತದಾನದ ಮಹತ್ವದ ಕುರಿತು ಅರಿವು ಮೂಡಿಸಿದರು. ಪ್ರತಿಯೊಬ್ಬ ನಾಗರಿಕನು ಜವಾಬ್ದಾರಿಯುತವಾಗಿ ಮತ ಚಲಾಯಿಸುವ ಮೂಲಕ ದೇಶದ ಭವಿಷ್ಯವನ್ನು ರೂಪಿಸಬಹುದು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ ನೂತನ ಮತದಾರರಿಗೆ ಮತದಾನ ಗುರುತಿನ ಚೀಟಿ ವಿತರಿಸಲಾಯಿತು
ಕಾರ್ಯಕ್ರಮದಲ್ಲಿ ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷರು, ಪೌರಯುಕ್ತರು, ತಾಲೂಕು ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು.

Leave a Reply

Your email address will not be published. Required fields are marked *