ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ರಾಯಚೂರು ಇವರಿಂದ ಜನವರಿ 25ರ ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾರುತಿ ಎಸ್. ಬಾಗಡೆ ಅವರು ಉದ್ಘಾಟನೆ ನೆರವೇರಿಸುವರು.
ಜಿಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿಸೀನಿಯರ್ ಸಿವಿಲ್ ಜಡ್ಡ್ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್. ಎ. ಸಾತ್ವಿಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಬಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
