ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 07ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಗೃಹಜ್ಯೋತಿ, ಯುವ ನಿಧಿ, ಅನ್ನಭಾಗ್ಯ, ಗೃಹ ಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
